- Kannada News Photo gallery Hassan: Yaduveer Krishnadatta Chamaraja Wadiyar couple visited Arjuna's tomb and offered pooja
ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ
22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಪೂಜೆ ಸಲ್ಲಿಸಿದ್ದಾರೆ.
Updated on: Dec 07, 2023 | 7:37 PM
Share

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್ ನೀಡಿದ್ದಾರೆ.
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!



