HD Deve Gowda: ಮನೆ ದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ
ಹಾಸನದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ, ಪುತ್ರ ಹೆಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ ಭಾಗಿಯಾಗಿದ್ದಾರೆ. ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿ (Suraj Revanna) ಮೇಲ್ಮನೆಗೆ ಆಯ್ಕೆಯಾದ ಬಳಿಕ (Karnataka Legislative Council) ನಡೆದ ಈ ಪೂಜೆಗೆ ಇಂದು ವಿಶೇಷ ಮಹತ್ವವಿತ್ತು.