AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits of custard apple: ಕೊಲೆಸ್ಟ್ರಾಲ್, ಕ್ಯಾನ್ಸರ್ ಸಮಸ್ಯೆಗೆ ಈ ಹಣ್ಣು ರಾಮಬಾಣ

ಸೀತಾಫಲವು ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ಹಣ್ಣು. ದಿನಕ್ಕೆ ಒಂದು ಸೀತಾಫಲ ತಿನ್ನುವುದು ನಮ್ಮ ಆರೋಗ್ಯವನ್ನು ಸುಧಾರಿಸುವ ಸುಲಭ ಮಾರ್ಗವಾಗಿದೆ. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಬೀಜವನ್ನು ಹೊರತುಪಡಿಸಿದರೆ ಇದರ ತಿರುಳು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಬಾಯಲ್ಲಿ ಹಾಗೆ ನುಣುಚಿಕೊಂಡು ಗಂಟಲು ಸೇರುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 22, 2025 | 2:54 PM

Share
ಸೀತಾಫಲವು  ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ಹಣ್ಣು. ಜನರು ಇಷ್ಟಪಟ್ಟು ಹಣ್ಣುಗಳಲ್ಲಿ ಸೀತಾಫಲವೂ ಒಂದು. ಮಕ್ಕಳಿಂದ ಹಿಡಿದು ವಯಸ್ಸಾದವರು ಸಹ ಸೀತಾಫಲ ಹಣ್ಣನ್ನು ತಿನ್ನಬಹುದು. ಬೀಜವನ್ನು ಹೊರತುಪಡಿಸಿದರೆ ಇದರ ತಿರುಳು ತಿನ್ನಲು ರುಚಿಕರವಾಗಿರುತ್ತದೆ ಮತ್ತು ಬಾಯಲ್ಲಿ ಹಾಗೆ ನುಣುಚಿಕೊಂಡು ಗಂಟಲು ಸೇರುತ್ತದೆ.

1 / 5
ಸೀತಾಫಲವು ಕೊಲೆಸ್ಟ್ರಾಲ್ ಮತ್ತು ಕ್ಯಾನ್ಸರ್ ಸಮಸ್ಯೆಗೆ ಇದು ರಾಮಬಾಣವಾಗಿದ್ದು ವಿಟಮಿನ್ ಸಿ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಸಾಕಷ್ಟು ವಿಟಮಿನ್ ಬಿ 6 ಇದೆ. ಒತ್ತಡವನ್ನು ಕಡಿಮೆ ಮಾಡಲು ಮತ್ತು ಮೆದುಳಿನ ಆರೋಗ್ಯವನ್ನು ಕಾಪಾಡಲು ಪ್ರಯೋಜನಕಾರಿಯಾಗಿದೆ.

2 / 5
ಸಾಮಾನ್ಯವಾಗಿ ಗರ್ಭಿಣಿ ಮಹಿಳೆಯರಿಗೆ ಬೆಳಗಿನ ಸಮಯದಲ್ಲಿ ಎದುರಾಗುವ, ವಾಕರಿಕೆ, ವಾಂತಿ, ಹಾಗೂ ದೇಹದಲ್ಲಿ ಹಾರ್ಮೋನುಗಳ ಬದಲಾವಣೆಗಳಿಂದ ಉಂಟಾಗುವ ಮಾನಸಿಕ ಬದಲಾವಣೆಗಳಿಗೆ ಸೀತಾಫಲ ಹಣ್ಣು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅಲ್ಲದೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಈ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3 / 5
ನಾರಿನಂಶದಿಂದ ಸಮೃದ್ಧವಾಗಿರುವ ಸೀತಾಫಲಹಣ್ಣು ಮಲಬದ್ಧತೆಯನ್ನು ನಿವಾರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ. ಇದು ಸಾಕಷ್ಟು ಕಬ್ಬಿಣದ ಅಂಶವನ್ನು ಹೊಂದಿರುತ್ತದೆ. ಆದ್ದರಿಂದ, ರಕ್ತಹೀನತೆ ಇರುವವರು ಅವುಗಳನ್ನು ತಮ್ಮ ಆಹಾರದಲ್ಲಿ ಸೇರಿಸಬಹುದು.

4 / 5
ಇನ್ನು ಸೀತಾಫಲ ಹಣ್ಣು ದೇಹಕ್ಕೆ ವಿಟಮಿನ್ ಸಿಯ ಜೊತೆಗೆ ಇನ್ನಿತರ ಆರೋಗ್ಯ ರಕ್ಷಣಾ ಅಂಶಗಳನ್ನು ನೀಡುವುದರಿಂದ ಇವು ದೀರ್ಘಕಾಲದ ಆರೋಗ್ಯ ಸಮಸ್ಯೆ ಗಳು ಬರದಂತೆ ತಡೆಯುವ ಸಾಮರ್ಥ್ಯವನ್ನು ಹೊಂದಿದೆ.​ ಅಲ್ಲದೆ ಹೃದಯದಕ್ಕೆ ಸಂಬಂಧಿಸಿದ ಸಾಕಷ್ಟು ಬಗೆಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!

ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್

ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​

ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ

ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!

ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ