Drinking Buttermilk health Factors: ಸಾಮಾನ್ಯವಾಗಿ ಹೆಚ್ಚಿನ ಜನರು ಎದ್ದ ನಂತರ ಕಾಫಿ ಮತ್ತು ಟೀ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ, ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಮಜ್ಜಿಗೆ ಕುಡಿದರೆ ಏನಾಗುತ್ತೆ ಅಂತ ಗೊತ್ತಾದ್ರೆ ಇನ್ಮುಂದೆ ಅದನ್ನೇ ಅಭ್ಯಾಸ ಮಾಡಿಕೊಳ್ಳುತ್ತೀರಿ.. ಯಾಕೆಂದರೆ ಮಜ್ಜಿಗೆಯಿಂದ ಹಲವಾರು ಲಾಭಗಳಿವೆ. ಮಜ್ಜಿಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕ್ಯಾಲೊರಿಗಳನ್ನು ಕಡಿಮೆ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಮಜ್ಜಿಗೆ ಕುಡಿಯುವುದರಿಂದ ಇನ್ನೂ ಕೆಲವು ಪ್ರಯೋಜನಗಳನ್ನು ತಿಳಿಯೋಣ.