ಕೊಲೆಸ್ಟ್ರಾಲ್: ಡಾರ್ಕ್ ಚಾಕೊಲೇಟ್ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ್ನು ಕರಗಿಸುವುದಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ಸಾಬೀತು ಮಾಡಿವೆ. ಹಾಗಾಗಿ ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ಹೃದಯದ ಆರೋಗ್ಯ ಕಾಪಾಡಿಕೊಳ್ಳಬಹುದು.
ರಕ್ತದೊತ್ತಡ ನಿಯಂತ್ರಣ: ಡಾರ್ಕ್ ಚಾಕೊಲೇಟ್‌ನಲ್ಲಿರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಡಾರ್ಕ್ ಚಾಕೊಲೇಟ್ ತಿನ್ನುವುದು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಮಟ್ಟವನ್ನು ಹೆಚ್ಚಿಸುತ್ತದೆ.
ಮೆದುಳಿನ ಕಾರ್ಯ: ಡಾರ್ಕ್ ಚಾಕೊಲೇಟ್ ಮೆಮೊರಿ ಪವರ್ ಹೆಚ್ಚಿಸಲು ಮತ್ತು ಮೆದುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ಮೆದುಳಿಗೆ ರಕ್ತದ ಹರಿವು ಸುಧಾರಿಸುತ್ತದೆ. ಪರಿಣಾಮವಾಗಿ ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಹೃದಯದ ಆರೋಗ್ಯ: ಡಾರ್ಕ್ ಚಾಕೊಲೇಟ್ ಹೃದಯರಕ್ತನಾಳದ ಕಾಯಿಲೆಯಿಂದ ರಕ್ಷಿಸುತ್ತದೆ. ಇದರ ಪರಿಣಾಮವಾಗಿ ಹೃದಯರಕ್ತನಾಳದ ಕಾಯಿಲೆ ಮತ್ತು ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ.
ತೂಕ ನಿಯಂತ್ರಣ: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯವು ಡಾರ್ಕ್ ಚಾಕೊಲೇಟ್ ಸೇವಿಸಿದ 1000 ಜನರ ಮೇಲೆ ಅಧ್ಯಯನ ನಡೆಸಿತು. ಹೆಚ್ಚು ಚಾಕಲೇಟ್ ತಿನ್ನುವವರು ತೆಳ್ಳಗಿರುತ್ತಾರೆ ಮತ್ತು ಸಾಂದರ್ಭಿಕವಾಗಿ ತಿನ್ನುವವರಿಗಿಂತ ಕಡಿಮೆ ತೂಕವನ್ನು ಹೊಂದಿರುತ್ತಾರೆ ಎಂದು ಅಧ್ಯಯನದಿಂದ ಸಾಬೀತಾಗಿದೆ. ಇದು ತೂಕ ನಷ್ಟವನ್ನು ಉತ್ತೇಜಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.