Health care: ಮಧುಮೇಹ ಇರುವವರು ಈ ಅಂಶಗಳನ್ನು ಗಮನಿಸಿ; ಇಲ್ಲದಿದ್ದರೆ ಅಪಾಯಗಳು ತಪ್ಪಿದ್ದಲ್ಲ

Health tips for Diabetes patient: ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಸಾಕಷ್ಟು ನೀರು ಕುಡಿಯಬೇಕು, ಒಳ್ಳೆಯ ನಿದ್ರೆ ಮಾಡಬೇಕು. ವ್ಯಾಯಾಮ, ನಡಿಗೆ ಮೊದಲಾದ ಚಟುವಟಿಕೆಯನ್ನು ನಿತ್ಯವೂ ನಡೆಸಬೇಕು. ಹಾಗೆಯೇ ತಿನ್ನುವ ಆಹಾರದಲ್ಲಿ ಸಕ್ಕರೆಯ ಮಟ್ಟ ಹೆಚ್ಚಿಸುವ ಆಹಾರ ಸೇವಿಸಬಾರದು. ಇಷ್ಟನ್ನು ನಿಯಮಿತವಾಗಿ ಮಾಡಿದರೆ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ.

shivaprasad.hs
|

Updated on:Apr 19, 2022 | 9:48 AM

ಮಧುಮೇಹ ಹೊಂದಿರುವವರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ತಿನ್ನುವ ಆಹಾರದ ಜೊತೆಗೆ ಈ ಅಭ್ಯಾಸಗಳ ಬಗ್ಗೆ ಜಾಗರೂಕರಾಗಿರಿ. ಇಲ್ಲದಿದ್ದರೆ ಸಣ್ಣಪುಟ್ಟ ಕೆಲಸ ಮಾಡಿದರೂ ಬೇಗ ಸುಸ್ತಾಗುತ್ತೀರಿ. ಜೊತೆಗೆ ಕೆಲವು ಆಹಾರ ಪದ್ಧತಿಗಳು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಸಮಸ್ಯೆ ತಂದೊಡ್ಡಬಹುದು. ಇವುಗಳನ್ನು ಗಮನಿಸಿ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ.

1 / 5
ಸಾಕಷ್ಟು ನೀರು ಕುಡಿಯದಿರುವುದು: ನೀವು ಸಾಕಷ್ಟು ನೀರು ಕುಡಿಯದಿದ್ದರೆ, ನಿಮ್ಮ ದೇಹವು ನಿರ್ಜಲೀಕರಣದಿಂದ ಬಳಲುತ್ತದೆ. ಪರಿಣಾಮವಾಗಿ ಬೇಗ ಆಯಾಸವಾಗುತ್ತದೆ. ಈ ಕಾರಣದಿಂದಲೇ ತಜ್ಞರು ದಿನಕ್ಕೆ ಕನಿಷ್ಠ 3 ಲೀಟರ್ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ.

2 / 5
ನಿದ್ರಾಹೀನತೆ: ಮಧುಮೇಹ ರೋಗಿಗಳು ತಮ್ಮ ನಿದ್ರೆಯ ಅವಧಿಯ ಬಗ್ಗೆ ಜಾಗರೂಕರಾಗಿರಬೇಕು. ತಜ್ಞರು ಶಿಫಾರಸು ಮಾಡಿದಂತೆ ಕನಿಷ್ಠ 8 ಗಂಟೆಗಳ ವಿಶ್ರಾಂತಿ ಪಡೆಯಿರಿ. ಇಲ್ಲದಿದ್ದರೆ ಆಯಾಸ ಹೆಚ್ಚಾಗಿ ಕಾಡುತ್ತದೆ. ನಿದ್ರಾಹೀನತೆ ದೀರ್ಘಾವಧಿಯಲ್ಲಿ ಸಮಸ್ಯೆ ತಂದೊಡ್ಡುತ್ತದೆ.

3 / 5
ಮಧುಮೇಹ ಹೊಂದಿರುವ ರೋಗಿಗಳು ಲಘು ವ್ಯಾಯಾಮ, ವಾಕಿಂಗ್ ಮತ್ತು ರನ್ನಿಂಗ್ ಸೇರಿದಂತೆ ವ್ಯಾಯಾಮಗಳನ್ನು ನಿಯಮಿತವಾಗಿ ಮಾಡಬೇಕು. ಇದರಿಂದ ಬಹಳಷ್ಟು ಪ್ರಯೋಜನಗಳಿವೆ. ಆದರೆ, ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಹಾಗೆ ಮಾಡದಿರಿ.

4 / 5
ಮಧುಮೇಹ ಹೊಂದಿರುವ ಹೆಚ್ಚಿನ ಜನರು ತಮ್ಮ ನಾಲಿಗೆಯನ್ನು ನಿಯಂತ್ರಿಸುವುದಿಲ್ಲ. ಅರ್ಥಾತ್ ಸಿಹಿತಿಂಡಿಗಳು, ಎಣ್ಣೆಯಲ್ಲಿ ಕರಿದ, ಮಸಾಲೆ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇವು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಆದ್ದರಿಂದ ಸೇವಿಸುವ ಆಹಾರದ ಮೇಲೆ ಹಿಡಿತವಿರಲಿ.

5 / 5

Published On - 9:48 am, Tue, 19 April 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ