- Kannada News Photo gallery Health Tips: There are many health benefits of consuming curd every day in summer
Health Tips: ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವನೆಯಿಂದ ಆರೋಗ್ಯಕ್ಕಿದೆ ಹಲವು ಪ್ರಯೋಜನ
ಬೇಸಿಗೆ ಆರಂಭವಾಗಿದೆ. ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಹಿಟ್ ಆಗುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದಕ್ಕೆ ಪ್ರತಿ ದಿನ ಮೊಸರು ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.
Updated on: Mar 17, 2023 | 7:00 AM

ಮೊಸರಿನಲ್ಲಿ ಆರೋಗ್ಯಕರ ಪೋಷಕಾಂಶಗಳು ಅಡಗಿವೆ. ಪ್ರತಿನಿತ್ಯ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲಿಯೂ ಬೇಸಿಗೆಯಲ್ಲಿ ಪ್ರತಿದಿನ ಮೊಸರು ಸೇವಿಸಿದರೆ ದೇಹಕ್ಕೆ ಔಷಧೀಯ ಗುಣಗಳು ಲಭಿಸುತ್ತವೆ. ಮೊಸರು ತಿನ್ನುವುದರಿಂದ ಆರೋಗ್ಯ ಸುಧಾರಿಸುವುದರ ಜೊತೆಗೆ ಅನೇಕ ಪ್ರಯೋಜನಗಳಿವೆ.

ಪ್ರತಿನಿತ್ಯ ಮೊಸರು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಏಕೆಂದರೆ ಇದರಲ್ಲಿರುವ ಫಾಸ್ಫರಸ್ ಮತ್ತು ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ.

ಮೊಸರಿನಲ್ಲಿ ಸತು ಮತ್ತು ವಿಟಮಿನ್-ಇ ಇರುವುದರಿಂದ ಇದು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಪ್ರತಿನಿತ್ಯ ಮೊಸರು ತಿನ್ನುವುದರಿಂದ ತ್ವಚೆಯು ಸುಂದರವಾಗಿ ಕಾಣುತ್ತದೆ.

ಮೊಸರು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳನ್ನು ಹೊಂದಿದೆ. ಹಾಗಾಗಿ ಮೊಸರು ತಿನ್ನವವರಿಗೆ ಹೊಟ್ಟೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ.

ಸ್ಥೂಲಕಾಯದಿಂದ ಬಳಲುತ್ತಿರುವವರು ಮೊಸರು ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ದಿನನಿತ್ಯ ಮೊಸರು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದಾಗಿದೆ.




