ಉಡುಪಿ, ಮಂಗಳೂರಿನಲ್ಲಿ ಭಾರಿ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಮಂಗಳೂರಿನಲ್ಲಿಬ್ಬರು ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಮಡಿಕೇರಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಸ್ತೆ, ಸೇತುವೆಗಳು ಮುಳುಗಿವೆ. ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

ಆಯೇಷಾ ಬಾನು
|

Updated on:Jun 27, 2024 | 10:37 AM

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

1 / 9
ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನದಿಗಳು, ಹಳ್ಳ, ತೊರೆಗಳು ಉಕ್ಕಿ ಹರಿಯುತ್ತಿವೆ. ಭಾಗಮಂಡಲ-ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಮಳೆಯಿಂದಾಗಿ ನೂತನ ಉದ್ಯಾನವನ, ಭಾಗಮಂಡಲ-ನಾಪೋಕ್ಲು ರಸ್ತೆ ಮುಳುಗಿದೆ.

2 / 9
ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಮ್ಮತ್ತಿ ಗ್ರಾಮದಲ್ಲಿ ಮರ ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಮರ ಬಿದ್ದಿದ್ದರಿಂದ ವಿದ್ಯುತ್ ಕಂಬ ಕೂಡ ತುಂಡಾಗಿ ಬಿದ್ದು ಕಾರು ಜಖಂಗೊಂಡಿದೆ.

3 / 9
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

4 / 9
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಜೈನರಗುರಿ ಎಂಬಲ್ಲಿ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಕುಸಿದಿದೆ. ಮನೆಯವರು ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ. ಮಜೀದ್ ಮತ್ತು ಅವರ ಇಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದ್ದಿದ್ದು ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ತಂದೆ ಪಾರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿದ್ದು ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

5 / 9
ಭಾರಿ ಮಳೆಯಿಂದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

6 / 9
ಉಡುಪಿಯಲ್ಲಿ ಮುಂಗಾರು ಮಳೆ ಜೋರಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡಿ ಭಾರೀ ಮಳೆ ಸುರಿದಿದೆ. ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಎದುರಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಎದುರಾಗುತ್ತೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು.

7 / 9
ಕಾಫಿನಾಡು, ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನಿನ್ನೆಯಿಂದಲೂ ಬಿಟ್ಟು-ಬಿಟ್ಟು ಸುರಿದ ಮಳೆಯಿಂದಾಗಿ ಮಲೆನಾಡಿಗರ ಜೀವನ ಅಸ್ತವ್ಯಸ್ತಗೊಂಡಿತ್ತು. ಮಲೆನಾಡು ತಾಲೂಕುಗಳಾದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರೀ ಮಳೆ ಬಿದ್ದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಮಳೆಯಾಗಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು.

8 / 9
ಮಂಗಳೂರಿನಲ್ಲಿ ಭಾರಿ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಮಂಗಳೂರಿನ ಪಾಂಡೇಶ್ವರದಲ್ಲಿ ವಿದ್ಯುತ್​ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದೆ. ಆಟೋ ಚಾಲಕನನ್ನ ರಕ್ಷಿಸಲು ಹೋಗಿ ದುರ್ಘಟನೆ ಸಂಭವಿಸಿದ್ದು ವಿದ್ಯುತ್​ ಪ್ರವಹಿಸಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ.

9 / 9

Published On - 8:47 am, Thu, 27 June 24

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್