- Kannada News Photo gallery Heavy rains lash Bengaluru; waterlogging on roads causes traffic snarls on major routes
ಬೆಂಗಳೂರಿನಲ್ಲಿ ಜೋರು ಮಳೆ: ರಸ್ತೆಗಳು ಜಲಾವೃತ, ಇಲ್ಲಿದೆ ಸಂಚಾರ ಸಲಹೆ
ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ಬೆಂಗಳೂರು ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ನಿಧಾನಗತಿಯ ಸಂಚಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಹಾಗಾದರೆ ಯಾವೆಲ್ಲಾ ಮಾರ್ಗಗಳಲ್ಲಿ ನಿಧಾನಗತಿಯ ಸಂಚಾರ ಇರಲಿದೆ ಎಂದು ಮಾಹಿತಿ ಇಲ್ಲಿದೆ.
Updated on: Sep 06, 2025 | 5:47 PM

ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಜೋರು ಮಳೆ ಸುರಿದಿದೆ.

ನಾಗರಬಾವಿ, ಮೈಸೂರು ರಸ್ತೆ, ಆರ್ಆರ್ ನಗರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಮಳೆ ಪರಿಣಾಮ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು.

ಜೋರು ಮಳೆ ಹಿನ್ನಲೆ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ನಿಧಾನಗತಿಯಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ರೂಪೇನ ಅಗ್ರಹಾರ ಜಂಕ್ಷನ್ ಕಡೆಯಿಂದ ಬೊಮ್ಮನಹಳ್ಳಿ ಕಡೆಗೆ, ಸಾರಕ್ಕಿ ಸಿಗ್ನಲ್ ಕಡೆಯಿಂದ ಜರಗನಹಳ್ಳಿ ಕಡೆಗೆ, ಮೈಸೂರು ರೋಡ್ ಟೋಲ್ ಗೇಟ್ ಕಡೆಯಿಂದ ಹಳೆ ಗುಡ್ಡದಹಳ್ಳಿ ಮತ್ತು ಬೊಮ್ಮನಹಳ್ಳಿ ಜಂಕ್ಷನ್ ಕಡೆಯಿಂದ ರೂಪೇನ ಅಗ್ರಹಾರ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ.

ಇನ್ನು ಹೆಬ್ಬಾಳ ಪೊಲೀಸ್ ಠಾಣೆ ಬಳಿ ಕೂಡ ಮಳೆ ನೀರು ನಿಂತಿರುವುದರಿಂದ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.

ಕಸ್ತೂರಿ ನಗರ ಮುಖ್ಯ ರಸ್ತೆ, ಟಿನ್ ಫ್ಯಾಕ್ಟರಿ ಕಡೆಯಿಂದ ರಾಮಮೂರ್ತಿನಗರ, ಹೆಬ್ಬಾಳ ರಸ್ತೆ ಮಾರ್ಗವಾಗಿ ವಾಹನಗಳ ಸಂಚಾರ ನಿಧಾನಗತಿಯಿರಲಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More
