Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.
Updated on: Jun 28, 2023 | 8:12 AM

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

ಅಮೇರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್ನ ನೋಡಿ ಅವರು ಖುಷಿಪಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.



















