Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

Updated on: Jun 28, 2023 | 8:12 AM

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

1 / 6
‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

2 / 6

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

3 / 6

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

4 / 6

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

5 / 6

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

6 / 6

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us