- Kannada News Photo gallery Here is the list of JIO Telecom Companys Best Prepaid Plans with Big Data offer
Reliance JIO: ಭರ್ಜರಿ ಡೇಟಾ, ಅನ್ಲಿಮಿಟೆಡ್ ಕಾಲ್: ಇಲ್ಲಿದೆ ನೋಡಿ ಜಿಯೋ ಕಂಪನಿಯ ಬಂಪರ್ ಆಫರ್ಗಳು
JIO Prepais Plans List: ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.
Updated on: Aug 08, 2022 | 6:45 AM

ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ ಜಿಯೋ ಈಗಾಗಲೇ ಡೇಟಾ ಪ್ರಯೋಜನದ ಯೋಜನೆಗಳ ಮೂಲಕ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ. ಜಿಯೋದ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಎಸ್ಎಮ್ಎಸ್ ಪ್ರಯೋಜನ ಪಡೆದಿವೆ.

ಜಿಯೋ ಟೆಲಿಕಾಂನಲ್ಲಿ ಮುಖ್ಯವಾಗಿ 299 ರೂ. ಪ್ರಿಪೇಯ್ಡ್ ಯೋಜನೆ ಹೆಚ್ಚು ಗಮನ ಸೆಳೆದಿದೆ. ಇದರಲ್ಲಿ ಬಳಕೆದಾರರು ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನವನ್ನು ಪಡೆಯುತ್ತಾರೆ. ಹಾಗೆಯೇ ಸಂಪೂರ್ಣ ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಲಾಗಿದೆ.

299 ರೂ. ಪ್ಲಾನ್ ನೊಂದಿಗೆ ಪ್ರತಿದಿನ 100 ಎಸ್ ಎಮ್ ಎಸ್ ಸೌಲಭ್ಯ ಲಭ್ಯವಿದೆ. ಇದು ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆ ಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆ್ಯಪ್ ಅನ್ನು ಸಹ ಪಡೆಯಬಹುದು.

ಇನ್ನು ಜಿಯೋ 479 ರೂ. ಪ್ರಿಪೇಯ್ಡ್ ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ ಎಮ್ ಎಸ್ ಸೌಲಭ್ಯ ನೀಡುತ್ತದೆ.

ಜಿಯೋ ಟೆಲಿಕಾಂನ 119 ರೂ. ಪ್ರಿಪೇಯ್ಡ್ ಯೋಜನೆ 14 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದಕೂಡ ಮೇಲ್ಕಂಡ ಸೌಲಭ್ಯ ಪಡೆದುಕೊಂಡಿದೆ.

ಜಿಯೋದ 239 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ್ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.









