
ದಿಗಂತ್, ನಿಧಿ ಸುಬ್ಬಯ್ಯ ಇನ್ನಿತರರು ನಟಿಸಿದ್ದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್ ಮುಖ್ಯ ಪಾತ್ರದಲ್ಲಿ ನಟಿಸಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ಲಾಲ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಣ್ಣಪ್ಪ’ ಈ ವಾರ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

ಸಹದೇವ್ ಕೆಲವಾಡಿ ನಿರ್ದೇಶನ ಮಾಡಿ ಗೋಪಾಲಕೃಷ್ಣ ದೇಶಪಾಂಡೆ ಮತ್ತು ಕೆಲ ಹೊಸಬರು ನಟಿಸಿರುವ ಭಿನ್ನ ಕಥಾವಸ್ತುವುಳ್ಳ ಕನ್ನಡ ಸಿನಿಮಾ ‘ಕೆಂಡ’ ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ರವಿಚಂದ್ರನ್, ದಿಗಂತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕೋರ್ಟ್ ರೂಂ ಡ್ರಾಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಬಹಳ ಸಮಯವೇ ಆಗಿದೆ. ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ನಿರ್ದೇಶನ ಮಾಡಿ ನಟನೆಯನ್ನೂ ಮಾಡಿರುವ ‘ಎಕ್ಸ್ ಆಂಡ್ ವೈ’ ಸಿನಿಮಾ ತುಸು ನಿರೀಕ್ಷೆ ಹುಟ್ಟಿಸಿತ್ತು. ಆದರೆ ಚಿತ್ರಮಂದಿರದಲ್ಲಿ ಗೆಲ್ಲಲಿಲ್ಲ. ಇದೀಗ ಈ ಸಿನಿಮಾ ಸನ್ ನೆಕ್ಸ್ಟ್ ಒಟಿಟಿಯಲ್ಲಿ ಬಿಡುಗಡೆ ಆಗಿದೆ.