‘ಕನ್ನಡತಿ’ ಸಾನಿಯಾ ಪಾತ್ರದಿಂದ ಹೊರ ಬಂದ ರಮೋಲಾ; ಇದಕ್ಕಿದೆ ಮಹತ್ವದ ಕಾರಣ
‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು.
Updated on: Dec 25, 2021 | 3:19 PM
Share

‘ಕನ್ನಡತಿ’ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದರು ರಮೋಲಾ. ಸಾನಿಯಾ ಹೆಸರಿನ ಪಾತ್ರವನ್ನು ಅವರು ಅದ್ಭುತವಾಗಿ ನಿರ್ವಹಿಸುತ್ತಿದ್ದರು.

ರತ್ನಾಮಾಲಾ ಅವರ ಕುಟುಂಬದ ಸೊಸೆಯಾಗಿ, ಮಾಲಾ ಶಿಕ್ಷಣ ಸಂಸ್ಥೆಯ ಎಂ.ಡಿ. ಆಗಿ ಅವರು ಕಾಣಿಸಿಕೊಂಡಿದ್ದರು. ಈ ಕ್ಯಾರೆಕ್ಟರ್ ದಿನಕಳೆದಂತೆ ಮಹತ್ವ ಪಡೆದುಕೊಳ್ಳುತ್ತಾ ಸಾಗಿತ್ತು. ಈಗ ರಮೋಲಾ ಧಾರಾವಾಹಿ ತಂಡ ತೊರೆದಿದ್ದಾರೆ.

ಈಗ ಈ ಸ್ಥಾನವನ್ನು ‘ಹೂ ಮಳೆ’ ಖ್ಯಾತಿಯ ಆರೋಹಿ ನೈನಾ ತುಂಬಿದ್ದಾರೆ.

ರಮೋಲಾ ‘ಕನ್ನಡತಿ’ಯಿಂದ ಹೊರ ನಡೆದಿರುವ ವಿಚಾರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ತರಿಸಿದೆ. ಅವರ ನಟನೆ ಅನೇಕರಿಗೆ ಇಷ್ಟವಾಗಿತ್ತು. ಅವರು ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುತ್ತಿದ್ದರು.

ಬೇರೆ ಭಾಷೆಯಿಂದ ಆಫರ್ ಬಂದ ಕಾರಣ ಸಾನಿಯಾ ಈ ಧಾರಾವಾಹಿ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪಾತ್ರವನ್ನು ಆರೋಹಿ ಹೇಗೆ ನಿರ್ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!




