- Kannada News Photo gallery Hindu Mahaganapati installation in the grand hall of Chitradurga: Here are the photos, Karnataka news in kannada
ಚಿತ್ರದುರ್ಗದ ಭವ್ಯ ಮಂಟಪದಲ್ಲಿ ವಿರಾಜಮಾನನಾದ ಹಿಂದೂ ಮಹಾಗಣಪತಿ: ಇಲ್ಲಿವೆ ಫೋಟೋಸ್
ಪ್ರತಿವರ್ಷದಂತೆ ಈವರ್ಷವೂ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಚಿತ್ರದುರ್ಗದ ಜೈನ ಧಾಮದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಶಿವಶರಣ ಮಾದಾರ ಚನ್ನಯ್ಯ ಮಠದ ಮಾದಾರ ಚನ್ನಯ್ಯ ಶ್ರೀ, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಶ್ರೀ ಸೇರಿದಂತೆ ವಿವಿಧ ಮಠಾಧೀಶರ ಆಗಮಿಸಿದ್ದರು. ಸೆ. 28ಕ್ಕೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದ್ದು ಪ್ರತಿ ವರ್ಷದಂತೆ ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದೆ.
Updated on: Sep 07, 2024 | 8:00 PM

ಕೋಟೆನಾಡು ಚಿತ್ರದುರ್ಗದ ಗಣೇಶೋತ್ಸವ ನಾಡಿನ ಗಮನ ಸೆಳೆದಿದೆ. ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ. ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯ ಭವ್ಯ ಮಂಟಪ ಹೇಗಿದೆ ನೋಡೋಣ ಬನ್ನಿ.

ಚಿತ್ರದುರ್ಗದಲ್ಲಿ ಜೈನ ಧಾಮದಲ್ಲಿ 18ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಿದ್ದು, ಆಸ್ಥಾನ ಮಂಟಪದಲ್ಲಿ ಗರೂಢಾರೂಢ ಹಿಂದೂ ಮಹಾಗಣಪತಿ ವಿರಾಜಮಾನನಾಗಿದ್ದಾನೆ. ಮಠಾಧೀಶರ ಸಾನಿಧ್ಯದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದೆ.

ಪ್ರತಿವರ್ಷದಂತೆ ಈವರ್ಷವೂ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಹಿಂದೂ ಮಹಾಗಣಪತಿಯನ್ನು ಕುರಿಸಿದ್ದು, ಈ ವೇಳೆ ಶಿವಶರಣ ಮಾದಾರ ಚನ್ನಯ್ಯ ಮಠದ ಮಾದಾರ ಚನ್ನಯ್ಯ ಶ್ರೀ, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಶ್ರೀ ಸೇರಿದಂತೆ ವಿವಿಧ ಮಠಾಧೀಶರ ಆಗಮಿಸಿದ್ದರು. ಚಿತ್ರದುರ್ಗದ ಬಿಜೆಪಿ ಸಂಸದ ಗೋವಿಂದ ಕಾರಜೋಳ, ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವಿರೇಂದ್ರ ಪಪ್ಪಿ ಸೇರಿದಂತೆ ಅನೇಕ ಗಣ್ಯರು ಭಾಗಿ ಆಗಿದ್ದರು.

ಇನ್ನು ಗಣೇಶೋತ್ಸವ ಹಿನ್ನೆಲೆ ಜೈನಧಾಮ ಬಳಿ ರಸ್ತೆ ಉದ್ದಕ್ಕೂ ದೀಪಲಂಕಾರ ಮಾಡಲಾಗಿದೆ. ಅಲ್ಲದೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಿದ ಆಸ್ಥಾನ ಮಂಟಪ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

ಮಂಟಪದಲ್ಲಿ ಶ್ರೀರಾಮ, ಕೃಷ್ಣ, ಆಂಜನೇಯ ಸೇರಿ ವಿವಿಧ ಆಕರ್ಷಕ ಮೂರ್ತಿಗಳು ಕಣ್ಮನ ಸೆಳೆಯುತ್ತಿವೆ. ಸೆಪ್ಟಂಬರ್ 28ರಂದು ಹಿಂದೂ ಮಹಾಗಣಪತಿ ಶೋಭಾ ಯಾತ್ರೆ ನಡೆಯಲಿದ್ದು ಲಕ್ಷಾಂತರ ಜನ ಸೇರಲಿದ್ದಾರೆ.

ಚಿತ್ರದುರ್ಗ ನಗರದಲ್ಲಿಂದು ಅದ್ಧೂರಿಯಾಗಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯ ನಡೆದಿದೆ. ಭವ್ಯ ಮಂಟಪದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಲಾಗಿದ್ದು ದರ್ಶನಕ್ಕೆ ಭಕ್ತರು ಸಾಲುಗಟ್ಟಿದ್ದಾರೆ.

21ದಿನಗಳ ಕಾಲವೂ ಭಕ್ತರು ದರ್ಶನಕ್ಕೆ ಬರಲಿದ್ದು ನಿತ್ಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಸೆ. 28ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮತ್ತು ವಿಸರ್ಜನೆ ನಡೆಯಲಿದ್ದು ಪ್ರತಿ ವರ್ಷದಂತೆ ಲಕ್ಷಾಂತರ ಜನ ಸೇರುವ ನಿರೀಕ್ಷೆಯಿದೆ.

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
Read More



