Updated on:Oct 25, 2022 | 6:36 PM
‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.
ಈಗ ಇಶಾ ಫೌಂಡೇಷನ್ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.
ಈ ಫೋಟೋಗಳನ್ನು ಇಶಾ ಫೌಂಡೇಷನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.
Published On - 5:43 pm, Tue, 25 October 22