AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ, ಭಾರತಕ್ಕೆ ರಷ್ಯಾ ಬೆಂಬಲ; ಇಂದು ಏನೇನಾಯ್ತು?

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಭಾರತ ಹಲವು ಬಾರಿ ಎಚ್ಚರಿಸಿದ್ದರೂ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸುತ್ತಲೇ ಇದೆ. ಇದಕ್ಕೆ ಭಾರತವೂ ಪ್ರತಿ ಉತ್ತರ ನೀಡುತ್ತಿದೆ. ಇಂದು ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೆ ಮೇ 7ರಂದು ರಕ್ಷಣಾ ಕವಾಯತು ನಡೆಸಲು ಸೂಚನೆ ನೀಡಿದೆ. ಪಾಕಿಸ್ತಾನ ರಷ್ಯಾದ ಬೆಂಬಲ ಕೋರಿದ್ದರೂ ರಷ್ಯಾ ಭಾರತಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಇಂದು ನಡೆದ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: May 05, 2025 | 8:22 PM

Share
ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್‌ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವಾಲಯ ಇಂದು ಆದೇಶ ನೀಡಿದ್ದು, ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಿ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಸಿದ್ಧತೆಯನ್ನು ಪರೀಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಮೇ 7ರ ಬುಧವಾರ ಸಮಗ್ರ ನಾಗರಿಕ ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಗೃಹ ಸಚಿವಾಲಯ (MHA) ರಾಜ್ಯಗಳಿಗೆ ನಿರ್ದೇಶನ ನೀಡಿದೆ

1 / 8
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸಶಸ್ತ್ರ ಪಡೆಗಳು ಪ್ರತೀಕಾರದ ದಾಳಿ ನಡೆಸುವ ಭೀತಿ ಹೆಚ್ಚುತ್ತಿರುವ ನಡುವೆ, ಪಾಕಿಸ್ತಾನವು 120 ಕಿಲೋಮೀಟರ್ ದೂರದವರೆಗಿನ ಗುರಿಗಳನ್ನು ಹೊಡೆಯುವ ಸಾಮರ್ಥ್ಯವಿರುವ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಕ್ಷಿಪಣಿಯನ್ನು ಪರೀಕ್ಷಿಸಿದೆ ಎಂದು ಪಾಕಿಸ್ತಾನಿ ಮಾಧ್ಯಮ ವರದಿಗಳು ತಿಳಿಸಿವೆ. ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಈ ಕ್ಷಿಪಣಿಗೆ 'ಫತಾಹ್' ಎಂದು ಹೆಸರಿಸಲಾಗಿದೆ. ಈ ಮೂಲಕ ಪಾಕಿಸ್ತಾನ ಯುದ್ಧಕ್ಕೆ ಭರಪೂರ ಸಿದ್ಧತೆ ನಡೆಸಿದೆ.

2 / 8
ರಷ್ಯಾದ ಮಾಸ್ಕೋದಲ್ಲಿರುವ ಪಾಕಿಸ್ತಾನ ರಾಯಭಾರಿ ಮೊಹಮ್ಮದ್ ಖಾಲಿದ್ ಜಮಾಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಶಮನಗೊಳಿಸಲು ರಷ್ಯಾದ ಸಹಾಯವನ್ನು ಕೋರಿದ್ದರು. 1966ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಲು ಸಹಾಯ ಮಾಡಿದ ತಾಷ್ಕೆಂಟ್ ಮಾತುಕತೆಗಳ ಸಮಯದಲ್ಲಿ ರಷ್ಯಾ ಮಾಡಿದಂತೆ ಈ ದ್ವಿಮುಖ ಸಂಬಂಧವನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಬಹುದು ಎಂದು ಅವರ ಮನವಿ ಮಾಡಿದ್ದಾರೆ.

3 / 8
ಪಾಕಿಸ್ತಾನದ ವಿರುದ್ಧ ಭಾರತ ಭಯೋತ್ಪಾದನಾ ದಾಳಿಯ ಆರೋಪ ಮಾಡಿದ ನಂತರ ಮೌನಕ್ಕೆ ಶರಣಾಗಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಒಮರ್ ಅಯೂಬ್ ಆಕ್ರೋಶ ಹೊರಹಾಕಿದ್ದಾರೆ. ಭಾರತವನ್ನು ಖಂಡಿಸಿ ವಿಧಾನಸಭೆಯಲ್ಲಿ ಇಂದು ಅವರು ಭಾಷಣ ಮಾಡಿದ್ದಾರೆ. ನಾವು ಮೊದಲು ಹೊಡೆಯಬೇಕು, ನಂತರ ಆ ಬಗ್ಗೆ ಯೋಚಿಸಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಅವರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ಶೆಹಬಾಜ್ ಅವರ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಭಾರತದ ಕಡೆಗೆ ನೀವು ವಿಧೇಯ ನಿಲುವು ತೆಗೆದುಕೊಂಡಿದ್ದು ಸರಿಯಲ್ಲ ಎಂದು ಟೀಕಿಸಿದ್ದಾರೆ. "ಭಾರತದ ವಿರುದ್ಧ ಕಠಿಣ ಸಂದೇಶ ರವಾನಿಸುವ ಬದಲು ಶೆಹಬಾಜ್ ಷರೀಫ್ ಮಂಡಿಯೂರಿ ಕುಳಿತಿದ್ದಾರೆ. ಪಹಲ್ಗಾಮ್ ನಮ್ಮಿಂದ 450 ಕಿಲೋಮೀಟರ್ ದೂರದಲ್ಲಿದೆ. ಇದಕ್ಕೂ ಪಾಕಿಸ್ತಾನಕ್ಕೂ ಏನು ಸಂಬಂಧ? ನಾವು ದಾಳಿಯನ್ನು ಖಂಡಿಸುತ್ತೇವೆ. ಪಾಕಿಸ್ತಾನ ಎಂದಿಗೂ ಇಂತಹ ಘಟನೆಗಳಲ್ಲಿ ಭಾಗಿಯಾಗಿಲ್ಲ" ಎಂದು ಅವರು ಹೇಳಿದ್ದಾರೆ.

4 / 8
ಪಾಕಿಸ್ತಾನಿ ಹ್ಯಾಕರ್‌ಗಳು ಭಾರತೀಯ ರಕ್ಷಣಾ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಸೈಬರ್ ದಾಳಿಗಳು ರಕ್ಷಣಾ ಸಿಬ್ಬಂದಿಯ ಲಾಗಿನ್ ಆಕ್ಸೆಸ್ ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಹ್ಯಾಕ್ ಮಾಡಿರುವ ಸಾಧ್ಯತೆಯಿದೆ. ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್ "ಪಾಕಿಸ್ತಾನ ಸೈಬರ್ ಫೋರ್ಸ್" ನ ಹ್ಯಾಕರ್‌ಗಳು ಮಿಲಿಟರಿ ಎಂಜಿನಿಯರ್ ಸರ್ವೀಸಸ್ ಮತ್ತು ಮನೋಹರ್ ಪರಿಕ್ಕರ್ ಇನ್‌ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಆ್ಯಂಡ್ ಅನಾಲಿಸಿಸ್‌ನ ಸೂಕ್ಷ್ಮ ಡೇಟಾಗಳನ್ನು ಹ್ಯಾಕ್ ಮಾಡಿರುವುದಾಗಿ ಹೇಳಿಕೊಂಡಿದೆ.

5 / 8
ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿದ್ದ ಭಾರತ ಇದೀಗ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಸಲಾಲ್ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಮುಚ್ಚಿದೆ. ಇದರ ಪರಿಣಾಮವಾಗಿ ಈ ನದಿಯ ಕೆಳಭಾಗದ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಇದು ಚೆನಾಬ್ ನದಿಯ ಬಹುತೇಕ ಭಾಗಗಳನ್ನು ಒಣಗಿಸಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್​ನಲ್ಲಿ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ದೃಶ್ಯಗಳು ವೈರಲ್ ಆಗಿದೆ. ಭಾರತವು ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಸ್ಥಗಿತಗೊಳಿಸಿದೆ ಮತ್ತು ಝೀಲಂ ನದಿಯ ಕಿಶನ್‌ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಪಾಕಿಸ್ತಾನಕ್ಕೆ ನೀರಿನ ಅಭಾವ ಎದುರಾಗಿದೆ.

6 / 8
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ರಷ್ಯಾದ ಅಧ್ಯಕ್ಷ ಪುಟಿನ್ ಅಮಾಯಕರ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರನ್ನು ಶಿಕ್ಷಿಸಬೇಕು ಎಂದು ರಷ್ಯಾದ ಅಧ್ಯಕ್ಷರು ಒತ್ತಿ ಹೇಳಿದ್ದಾರೆ.

7 / 8
ಪಾಕಿಸ್ತಾನ ಭಾರತಕ್ಕೆ ತೊಂದರೆ ಮಾಡುವ ಮೊದಲು ಪಾಕಿಸ್ತಾನ 100 ಬಾರಿ ಆಲೋಚಿಸಬೇಕು ಅಂತಹ ಕ್ರಮ ಕೈಗೊಳ್ಳಿ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡುವ ಮೊದಲು ಪಾಕಿಸ್ತಾನ 100 ಬಾರಿ ಯೋಚಿಸಬೇಕು. ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದಕತೆ ಹರಡುತ್ತಿದೆ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ಪಾಕಿಸ್ತಾನ ಹೇಳಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸುವ ಓವೈಸಿ ಪಾಕಿಸ್ತಾನ ನಾಚಿಕೆಯಿಲ್ಲದೆ ಪುರಾವೆ ಕೇಳುತ್ತಿದೆ. ಭಯೋತ್ಪಾದನಾ ದಾಳಿ ನಡೆಸಿದ್ದು ನಾವೇ ಎಂಬುದಕ್ಕೆ ಭಾರತ ಪುರಾವೆ ಕೊಡಲಿ ಎಂದಿದ್ದಾರೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ