AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ,ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ: ಲೋಕಾಯುಕ್ತ ಶಾಕ್

ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಮೊನ್ನೆ ಅಷ್ಟೇ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ, ಧಾರವಾಡ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿ,ಪಾಸ್ತಿ ದಾಖಲೆಗಳು ಪತ್ತೆಯಾಗಿವೆ. ಇನ್ನೂ ಅಧಿಕಾರಿಯೊಬ್ಬರ ಮನೆಯಲ್ಲಿ ಮಕ್ಕಳಿಗೆ ನೀಡಬೇಕಿದ್ದ ಹಾಸಿಗೆ,ಬೆಡ್‌ಶೀಟ್‌ ಪತ್ತೆಯಾಗಿವೆ. ಅಲ್ಲದೇ ಹಾಸ್ಟೆಲ್​ ನಲ್ಲಿ ಅಡುಗೆಗೆ ಬಳಸುವ ಹೊಸ ದೊಡ್ಡ ದೊಡ್ಡ ಪಾತ್ರೆಗಳು ಸಿಕ್ಕಿವೆ. ಇದನ್ನು ಕಂಡು ಲೋಕಾಯುಕ್ತರೇ ಶಾಕ್ ಆಗಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Mar 07, 2026 | 4:18 PM

Share
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ  ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದ್ದು. ದಾಳಿಯಲ್ಲಿ ಎಂ.ಕೆ.ಸುರಕೋಡ  ಅವರು ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ.

1 / 6
ಲೋಕಾಯುಕ್ತ ಪೊಲೀಸರ ಶೋಧ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ದಂಗುಬಡಿಸಿದೆ.

2 / 6
ಇವುಗಳ ಜತೆಗೆ 13 ಲಕ್ಷ ರೂಪಾಯಿ ಮೌಲ್ಯದ ಆರು ನಿವೇಶನಗಳು, 45 ಲಕ್ಷ ರೂ. ಮೌಲ್ಯದ ಮನೆ, 80.77 ಲಕ್ಷ ರೂ. ಮೌಲ್ಯದ 29 ಎಕರೆ ಜಮೀನು ಸೇರಿದಂತೆ ಒಟ್ಟು 1.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳು ಸಿಕ್ಕಿವೆ.

3 / 6
ಹಾಗೇ 89 ಸಾವಿರ ನಗದು, 23.21 ಲಕ್ಷ ಮೌಲ್ಯದ 152 ಗ್ರಾಂ ಚಿನ್ನಾಭರಣ, 2.05 ಲಕ್ಷ ಮೌಲ್ಯದ ಬೆಳ್ಳಿ, 31.40 ಲಕ್ಷ ಮೌಲ್ಯದ ವಾಹನಗಳು ಸೇರಿದಂತೆ ಒಟ್ಟು ₹1.82 ಕೋಟಿ ಆಸ್ತಿ ಪತ್ತೆ ಮಾಡಿದ್ದಾರೆ.

4 / 6
 ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಬಿಸಿಎಂ ಇಲಾಖೆಯು, ವಿದ್ಯಾರ್ಥಿಗಳಿಗೆ ನೀಡುವಂತೆ  ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು ಅಧಿಕಾರಿಯ ಮನೆಯಲ್ಲಿ ಪತ್ತೆಯಾಗಿವೆ.

5 / 6
ಹಾಗೇ  ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು ಸಿಕ್ಕಿದ್ದು, ಅಧಿಕಾರಿಗಳನ್ನು ಅಚ್ಚರಿ ವ್ಯಕ್ತಪಡಿಸಿದ್ದಾರೆ.

6 / 6

Published On - 4:18 pm, Sat, 7 March 26

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ

ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ

ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್

ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್

ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ