AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ

ಹೃತಿಕ್ ರೋಷನ್ ಅವರು ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

ಸಕ್ಸಸ್ ಸಿಕ್ಕಮೇಲೆ ಖುಷಿ ಸಿಗುತ್ತಾ? ಹೃತಿಕ್ ರೋಷನ್ ಹೇಳೋದೇ ಬೇರೆ
ಹೃತಿಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 26, 2024 | 8:57 AM

Share

ಯಶಸ್ಸು ಸಿಕ್ಕ ಮೇಲೆ ಅಥವಾ ಒಂದು ಹಂತ ದಾಟಿದ ಮೇಲೆ ಖುಷಿ ಸಿಗುತ್ತದೆ ಎಂದು ಅನೇಕರು ಭಾವಿಸಿರುತ್ತಾರೆ. ಇದು ಸಮಾಜದಲ್ಲಿರುವ ನಂಬಿಕೆ ಕೂಡ ಹೌದು. ಆದರೆ, ಸಕ್ಸಸ್​​ನ ಆಸ್ವಾದಿಸಿದವರಿಗೆ ಖುಷಿಯ ಅನುಭವ ಆಗುತ್ತದೆಯೇ? ಇಲ್ಲ ಎನ್ನುತ್ತಾರೆ ಹೃತಿಕ್ ರೋಷನ್. ಬಾಲಿವುಡ್​ನ ಯಶಸ್ವಿ ಹೀರೋಗಳಲ್ಲಿ ಅವರೂ ಒಬ್ಬರು. ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಅವರು ಯಶಸ್ಸಿನ ಬಗ್ಗೆ ಮಾತನಾಡಿದ್ದರು. ಯಶಸ್ಸು ಸಿಕ್ಕ ಬಳಿಕ ಏನಾಗುತ್ತದೆ ಎಂಬುದನ್ನು ಹೇಳಿದ್ದಾರೆ.

‘ಯಶಸ್ಸು ಸಿಕ್ಕ ಬಳಿಕ ಖುಷಿ ಸಿಗುತ್ತದೆ ಎಂದು ಯಾರೋ ಹೇಳಿದ್ದರು. ಸಕ್ಸಸ್ ಹಾಗೂ ಖುಷಿ ಎರಡೂ ಒಂದೇ ಎಂದು ಹೇಳಿದ್ದರು. ನಾನು ಹೋಗಿ ಹುಡುಕಿದೆ. ಆದರೆ ಸಿಕ್ಕಿಲ್ಲ. ಖುಷಿಯಾಗಿರೋದು ಒಂದು ಪ್ರ್ಯಾಕ್ಟಿಸ್. ಅದನ್ನು ನಾವು ನಿತ್ಯವೂ ಮಾಡಬೇಕು. ಅದನ್ನು ಎಲ್ಲರಿಗೂ ಹೇಳಿಕೊಡಬೇಕು. ಅಂದಾಗ ಮಾತ್ರ ಖುಷಿಯಿಂದ ಇರಲು ಸಾಧ್ಯ’ ಎಂದಿದ್ದಾರೆ ಅವರು.

ಹೃತಿಕ್ ರೋಷನ್ ಅವರ ಮಾತನ್ನು ಅನೇಕರು ಒಪ್ಪಿದ್ದಾರೆ. ಈ ವಿಡಿಯೋಗೆ ನಾನಾ ವಿವಿಧ ಕಮೆಂಟ್​ಗಳು ಬಂದಿವೆ. ‘ಹೌದು, ಖುಷಿ ಅನ್ನೋದು ಯಾವುದೋ ಸ್ಥಾನದಲ್ಲಿ ಇರುವುದಿಲ್ಲ. ಅದು ನಮ್ಮಲ್ಲೇ ಇರುತ್ತದೆ. ಅದನ್ನು ಎಂದಿಗೂ ಹುಡುಕಲು ಹೋಗಬಾರದು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಹೃತಿಕ್ ಅವರು ಖುಷಿಯಿಂದ ಇಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಹೃತಿಕ್ ರೋಷನ್ ಅವರು ಸ್ಟಾರ್ ಕಿಡ್. ಅವರ ತಂದೆ ರಾಕೇಶ್ ರೋಶನ್ ಖ್ಯಾತ ನಿರ್ದೇಶಕರು ಹಾಗೂ ನಿರ್ಮಾಪಕರು. ಈ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿತು. ಅವರು ನಂತರ ತಮ್ಮನ್ನು ತಾವು ಸಾಬೀತು ಮಾಡಿಕೊಂಡರು. ಹೃತಿಕ್ ಬೇಡಿಕೆ ಈಗ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ಹೃತಿಕ್ ರೋಷನ್​ ಫ್ಯಾಮಿಲಿ ಬಗ್ಗೆ ನೆಟ್​ಫ್ಲಿಕ್ಸ್​ ಡಾಕ್ಯುಮೆಂಟರಿ; ಯಾವಾಗ ಪ್ರಸಾರ?

ಹೃತಿಕ ಅವರು ‘ವಾರ್’ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಈ ವರ್ಷ ರಿಲೀಸ್ ಆದ ಅವರ ನಟನೆಯ ‘ಫೈಟರ್’ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಅವರು ಈಗ ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ದಕ್ಷಿಣದ ಹೀರೋ ಜೂನಿಯರ್ ಎನ್​ಟಿಆರ್ ಕೂಡ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!