ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ (ರೈಲ್ವೆ ನಿಲ್ದಾಣ) ನಿರ್ಮಿಸಲಾಗಿದ್ದು, ಈ ಕಲಾಕೃತಿಯನ್ನು ಹುಬ್ಬಳ್ಳಿಯ ಆರ್ಟ್ ವಾಲೇ ಸಂಸ್ಥೆ ನಿರ್ಮಿಸಿರುವುದು ಮತ್ತೊಂದು ವಿಶೇಷ. ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಆರ್ಟ್ ವಾಲೆ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾದ ಗೌತಮ್ ಓಸ್ತವಾಲ್ ಹಾಗೂ ಆರ್ಟ್ ಡೈರೆಕ್ಟರ್ ನಿಧಿ ಓಸ್ತವಾಲ್ ಅವರ ಮಾರ್ಗದರ್ಶನದಲ್ಲಿ ಈ ಕಲಾಕೃತಿಗಳನ್ನು ನಿರ್ಮಿಸಲಾಗಿದೆ.