ಭಿಕ್ಷೆ ಬೇಡಿ ಕೇಂದ್ರದ ಕಣ್ಣು ತೆರೆಸುತ್ತೇನೆ; ಸಂತ್ರಸ್ತರ ಬೆನ್ನಿಗೆ ನಿಂತ ಲಕ್ಷ್ಮಿ ಹೆಬ್ಬಾಳ್ಕರ್

|

Updated on: Sep 07, 2019 | 4:37 PM

ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದ ಸಂತ್ರಸ್ತರ ಜೊತೆ ಚರ್ಚೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಹೆಬ್ಬಾಳ್ಕರ್, ಕೇಂದ್ರ ಸರ್ಕಾರದಿಂದ ಒಂದೇ ಒಂದು ರೂಪಾಯಿಯೂ ನೆರೆ ಪರಿಹಾರ ಸಿಕ್ಕಿಲ್ಲ. ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಹೀಗಾಗಿ ಕೇಂದ್ರ ಸರ್ಕಾರ […]

ಭಿಕ್ಷೆ ಬೇಡಿ ಕೇಂದ್ರದ ಕಣ್ಣು ತೆರೆಸುತ್ತೇನೆ; ಸಂತ್ರಸ್ತರ ಬೆನ್ನಿಗೆ ನಿಂತ ಲಕ್ಷ್ಮಿ ಹೆಬ್ಬಾಳ್ಕರ್
Follow us on

ಬೆಂಗಳೂರಿನಲ್ಲಿ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದ ಸಂತ್ರಸ್ತರ ಜೊತೆ ಚರ್ಚೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಹೆಬ್ಬಾಳ್ಕರ್, ಕೇಂದ್ರ ಸರ್ಕಾರದಿಂದ ಒಂದೇ ಒಂದು ರೂಪಾಯಿಯೂ ನೆರೆ ಪರಿಹಾರ ಸಿಕ್ಕಿಲ್ಲ. ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಹೀಗಾಗಿ ಕೇಂದ್ರ ಸರ್ಕಾರ ಬರದ ಪರಿಹಾರ ಹಣ ಬಿಡುಗಡೆ ಮಾಡಿದೆ. ಆ ಹಣದಲ್ಲಿ 10 ಸಾವಿರ ರೂಪಾಯಿ ಕೊಟ್ಟು ನಿಮ್ಮನ್ನ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತೇನೆ, ಭಿಕ್ಷೆ ಬೇಡಿ ಕೇಂದ್ರದ ಕಣ್ಣು ತೆರೆಸ್ತೇನೆ ಎಂಬ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತಿಗೆ ಅಲ್ಲಿದ್ದ ಸಂತ್ರಸ್ತರು ನಗಾಡಿದರು. ಆಗ ಹೆಬ್ಬಾಳ್ಕರ್ ಮತ್ತೊಮ್ಮೆ ದೇವರ ಮೇಲೆ ಆಣೆ ಮಾಡಿ ಮತ್ತೊಮ್ಮೆ ಪುನರುಚ್ಚರಿಸಿದರು. ಯಾರಾದ್ರು ನಿಮ್ಮನ್ನ ಸಾಲ ಮರುಪಾವತಿಸಿ ಅಂಥ ಕೇಳಿದ್ರೆ ನಿಮ್ಮ ಹೆಸರು ಬರೆದು ವಿಷ ಸೇವಿಸುವುದಾಗಿ ಹೇಳಿ ಅಂತ ಸಂತ್ರಸ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚೋದಿಸಿದರು.

ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರವಾಗಿದೆ. ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಗೋಕಾಕ್ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಡಿತ ಸಾಧಿಸಲು ಮುಂದಾಗಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಹೀಗಾಗಿಯೇ ನೆರೆ ಸಂತ್ರಸ್ತರನ್ನ ಭೇಟಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

Published On - 4:36 pm, Fri, 30 August 19