AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಅಭಿಷೇಕ್ ಶರ್ಮಾ

Abhishek Sharma World Record: ಏಷ್ಯಾಕಪ್‌ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 931 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಇತಿಹಾಸ ಸೃಷ್ಟಿಸಿರುವ ಇವರು, ಡೇವಿಡ್ ಮಲನ್, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಹಿಂದಿನ ದಾಖಲೆಗಳನ್ನು ಮುರಿದು ನಂ. 1 ಸ್ಥಾನಕ್ಕೇರಿದ್ದಾರೆ.

ಪೃಥ್ವಿಶಂಕರ
|

Updated on:Oct 01, 2025 | 8:04 PM

Share
2025 ರ ಏಷ್ಯಾಕಪ್‌ನಲ್ಲಿ ರನ್​ಗಳ ಮಳೆ ಹರಿಸಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದುವರೆಗೆ ಯಾವ ಆಟಗಾರನಿಗೂ ಮಾಡಲಾಗದ ದಾಖಲೆಯನ್ನು ಅಭಿಷೇಕ್ ಶರ್ಮಾ ಮಾಡಿದ್ದಾರೆ.

1 / 7
ಭಿಷೇಕ್ ಶರ್ಮಾ ಈಗಾಗಲೇ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದರು. ಈ ವಾರವೂ ಅಗ್ರಸ್ಥಾನದಲ್ಲಿ ಮುಂದುವರೆದಿರುವ ಅಭಿಷೇಕ್, ಐಸಿಸಿ ಶ್ರೇಯಾಂಕದ ರೇಟಿಂಗ್ ಪಾಯಿಂಟ್‌ಗಳಲ್ಲಿ ವಿಚಾರದಲ್ಲಿ ಅತ್ಯಧಿಕ ರೇಟಿಂಗ್ ಪಾಯಿಂಟ್ ಕಲೆಹಾಕುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಭಾರತದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್​ಗೂ ಸಾಧಿಸಲು ಸಾಧ್ಯವಾಗದುದ್ದನ್ನು ಸಾಧಿಸುವ ಮೂಲಕ ಅಭಿಷೇಕ್ ಶರ್ಮಾ ವಿಶ್ವದ ಗಮನ ಸೆಳೆದಿದ್ದಾರೆ.

2 / 7
ಐಸಿಸಿ ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿದ ವಿಶ್ವ ದಾಖಲೆಯನ್ನು ಡೇವಿಡ್ ಮಲನ್ ಈ ಹಿಂದೆ ಹೊಂದಿದ್ದರು. ಈ ಇಂಗ್ಲೆಂಡ್ ಬ್ಯಾಟ್ಸ್‌ಮನ್ 919 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಅಭಿಷೇಕ್ ಶರ್ಮಾ 931 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮಲನ್ ಅವರ ದಾಖಲೆಯನ್ನು ಮೀರಿಸಿದ್ದಾರೆ.

3 / 7
ಐಸಿಸಿ ಶ್ರೇಯಾಂಕದಲ್ಲಿ 900 ರೇಟಿಂಗ್ ಪಾಯಿಂಟ್‌ಗಳನ್ನು ತಲುಪಿದ ಅಥವಾ ಮೀರಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿರುವ ಅಭಿಷೇಕ್, 931 ರೇಟಿಂಗ್ ಪಾಯಿಂಟ್‌ಗಳನ್ನು ಕಲೆಹಾಕಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 7
ಐಸಿಸಿ ಟಿ20 ಶ್ರೇಯಾಂಕದಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅತ್ಯಧಿಕ ಅಂದರೆ 912 ರೇಟಿಂಗ್ ಪಾಯಿಂಟ್‌ಗಳನ್ನು ತಲುಪಿದ್ದರೆ, ವಿರಾಟ್ ಕೊಹ್ಲಿ 909 ರೇಟಿಂಗ್ ಪಾಯಿಂಟ್‌ಗಳನ್ನು ಕಲೆಹಾಕಿದ್ದರು. ಆದರೆ, ಅಭಿಷೇಕ್ ಶರ್ಮಾ ಈ ವಿಷಯದಲ್ಲಿ ಇಬ್ಬರನ್ನೂ ಹಿಂದಿಕ್ಕಿದ್ದಾರೆ.

5 / 7
ಅಭಿಷೇಕ್ ಶರ್ಮಾ ಪ್ರಸ್ತುತ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿಶ್ವ ದಾಖಲೆಯ ರೇಟಿಂಗ್ ಅಂಕಗಳೊಂದಿಗೆ ನಂ. 1 ಸ್ಥಾನದಲ್ಲಿದ್ದಾರೆ. ತಿಲಕ್ ವರ್ಮಾ ಕೂಡ 819 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 844 ರೇಟಿಂಗ್ ಅಂಕಗಳನ್ನು ಹೊಂದಿರುವ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಎರಡನೇ ಸ್ಥಾನದಲ್ಲಿದ್ದಾರೆ.

6 / 7
ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ.  ಪ್ರಸ್ತುತ  698 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಸೂರ್ಯ ಹೊಸ ಶ್ರೇಯಾಂಕದಲ್ಲಿ ಆರನೇ ಸ್ಥಾನದಿಂದ ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ. 2025 ರ ಏಷ್ಯಾ ಕಪ್‌ನಲ್ಲಿ ಕಳಪೆ ಪ್ರದರ್ಶನದ ಪರಿಣಾಮಗಳನ್ನು ಯಾದವ್ ಅನುಭವಿಸಿದ್ದಾರೆ.

7 / 7

Published On - 3:58 pm, Wed, 1 October 25