Sugar Control Tips: ಈ ವ್ಯಾಯಾಮಗಳನ್ನ ಮಾಡಿದರೆ ಶುಗರ್ ಕಂಟ್ರೋಲ್​​​ಗೆ ಬರುತ್ತಂತೆ: ಒಮ್ಮೆ ಟ್ರೈ ಮಾಡಿ

Updated on: May 14, 2023 | 10:17 PM

ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ.

1 / 5
ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ 
ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ.
ವಾರಕ್ಕೆ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿ. 
ಅಂದರೆ ದಿನಕ್ಕೆ ಕನಿಷ್ಠ 21 ನಿಮಿಷ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. 
ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ. ವಾರಕ್ಕೆ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ಅಂದರೆ ದಿನಕ್ಕೆ ಕನಿಷ್ಠ 21 ನಿಮಿಷ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

2 / 5

ಈಜು: ಈಜು ದೇಹಕ್ಕೆ ಅತ್ಯುತ್ತಮ ವ್ಯಾಯಾಮ. ಮಧುಮೇಹವನ್ನು ನಿಯಂತ್ರಿಸುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ. ಅಧ್ಯಯನದ ಪ್ರಕಾರ, ಈಜು ಟೈಪ್-1 ಮತ್ತು ಟೈಪ್-2 ಡಯಾಬಿಟಿಸ್ ಎರಡರಲ್ಲೂ ಪ್ರಯೋಜನಕಾರಿಯಾಗಿದೆ. ಈಜು ರಕ್ತ ಪರಿಚಲನೆಯನ್ನು ವೇಗಗೊಳಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

3 / 5

ಸೈಕ್ಲಿಂಗ್: ಸೈಕ್ಲಿಂಗ್ ಎನ್ನುವುದು ಏರೋಬಿಕ್ ವ್ಯಾಯಾಮದ ಒಂದು ಭಾಗ. ಇದು ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಅಧಿಕ ತೂಕ ಮತ್ತು ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಸೈಕ್ಲಿಂಗ್ ಒಳ್ಳೆಯದು. ಸೈಕ್ಲಿಂಗ್ ಉಪಯುಕ್ತ ವ್ಯಾಯಾಮಗಳಲ್ಲಿ ಒಂದು ಎನ್ನುತ್ತಾರೆ ಆರೋಗ್ಯ ತಜ್ಞರು.

4 / 5

ಯೋಗ: ಯೋಗವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಯೋಗವು ತುಂಬಾ ಸಹಾಯಕವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಅಧ್ಯಯನವೊಂದರ ಪ್ರಕಾರ ಪ್ರತಿದಿನ ಅರ್ಧ ಗಂಟೆ ಯೋಗ ಮಾಡುವುದರಿಂದ ಮಧುಮೇಹದ ಸಮಸ್ಯೆಯನ್ನು ಕಡಿಮೆ ಮಾಡಬಹುದು.

5 / 5

ನಡಿಗೆ: ನಡಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಡಬೇಕಾದ ವ್ಯಾಯಾಮ. ದೈನಂದಿನ ನಡಿಗೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಧುಮೇಹದ ಸಮಸ್ಯೆಯನ್ನು ನಿವಾರಿಸುವಲ್ಲಿ ಜಾಗಿಂಗ್ ಪ್ರಮುಖ ಪಾತ್ರ ವಹಿಸುತ್ತದೆ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us