ಜನಪ್ರಿಯ ನಟಿ ಇಲಿಯಾನಾ ಡಿಕ್ರೂಸ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಆಸ್ಪತ್ರೆ ಬೆಡ್ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಹೆಲ್ತ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
ಇಲಿಯಾನಾ ಡಿಕ್ರೂಸ್ ಅವರಿಗೆ ಡ್ರಿಪ್ಸ್ ಹಾಕಲಾಗಿದೆ. ಈಗ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಅವರು ಪೂರ್ತಿ ಗುಣಮುಖರಾಗಿ ಮನೆಗೆ ಮರಳಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುವ ಮೂಲಕ ಇಲಿಯಾನಾ ಡಿಕ್ರೂಸ್ ಅವರು ಫೇಮಸ್ ಆಗಿದ್ದಾರೆ. 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಸಿನಿಮಾ ಆಯ್ಕೆಯಲ್ಲಿ ಇಲಿಯಾನಾ ಸಖತ್ ಚ್ಯೂಸಿ ಆಗಿದ್ದಾರೆ.
‘ಫಿಲ್ಮ್ ಫೇರ್’ ಸೇರಿದಂತೆ ಹಲವು ಪ್ರಶಸ್ತಿಗಳು ಇಲಿಯಾನಾ ಡಿಕ್ರೂಸ್ ಅವರಿಗೆ ಒಲಿದಿವೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಸಿನಿಮಾ ಮಾತ್ರವಲ್ಲದೇ ಮ್ಯೂಸಿಕ್ ವಿಡಿಯೋಗಳಲ್ಲೂ ಇಲಿಯಾನಾ ಡಿಕ್ರೂಸ್ ನಟಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.
Published On - 8:59 pm, Mon, 30 January 23