Ileana Dcruz: ಆಸ್ಪತ್ರೆಗೆ ದಾಖಲಾದ ಇಲಿಯಾನಾ ಡಿಕ್ರೂಸ್; ಫೋಟೋ ಮೂಲಕ ಮಾಹಿತಿ ತಿಳಿಸಿದ ಖ್ಯಾತ ನಟಿ
Ileana Dcruz Hospitalized: ನಟಿ ಇಲಿಯಾನಾ ಡಿಕ್ರೂಸ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
1 / 5
ಜನಪ್ರಿಯ ನಟಿ ಇಲಿಯಾನಾ ಡಿಕ್ರೂಸ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
2 / 5
ಆಸ್ಪತ್ರೆ ಬೆಡ್ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಹೆಲ್ತ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
3 / 5
ಇಲಿಯಾನಾ ಡಿಕ್ರೂಸ್ ಅವರಿಗೆ ಡ್ರಿಪ್ಸ್ ಹಾಕಲಾಗಿದೆ. ಈಗ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಅವರು ಪೂರ್ತಿ ಗುಣಮುಖರಾಗಿ ಮನೆಗೆ ಮರಳಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
4 / 5
ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುವ ಮೂಲಕ ಇಲಿಯಾನಾ ಡಿಕ್ರೂಸ್ ಅವರು ಫೇಮಸ್ ಆಗಿದ್ದಾರೆ. 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಸಿನಿಮಾ ಆಯ್ಕೆಯಲ್ಲಿ ಇಲಿಯಾನಾ ಸಖತ್ ಚ್ಯೂಸಿ ಆಗಿದ್ದಾರೆ.
5 / 5
‘ಫಿಲ್ಮ್ ಫೇರ್’ ಸೇರಿದಂತೆ ಹಲವು ಪ್ರಶಸ್ತಿಗಳು ಇಲಿಯಾನಾ ಡಿಕ್ರೂಸ್ ಅವರಿಗೆ ಒಲಿದಿವೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಸಿನಿಮಾ ಮಾತ್ರವಲ್ಲದೇ ಮ್ಯೂಸಿಕ್ ವಿಡಿಯೋಗಳಲ್ಲೂ ಇಲಿಯಾನಾ ಡಿಕ್ರೂಸ್ ನಟಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.
Published On - 8:59 pm, Mon, 30 January 23