ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿವೆ ಬಂಪರ್ ಸಿನಿಮಾಗಳು: ಪಟ್ಟಿ ಇಲ್ಲಿದೆ

Updated on: Dec 06, 2025 | 8:31 PM

Upcoming movies: ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿದ್ದವು. ಅದೇ ಸಮಯದಲ್ಲಿ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಪ್ಲ್ಯಾನ್ ಮಾಡುತ್ತಿದ್ದರು. ಆದರೆ ಐಪಿಎಲ್​​ನಿಂದಲೇ ಏನೋ ಈಗ ಏಪ್ರಿಲ್-ಮೇ ತಿಂಗಳಲ್ಲಿ ಹೆಚ್ಚಾಗಿ ಸಿನಿಮಾಗಳು ಬಿಡುಗಡೆಯೇ ಆಗುವುದಿಲ್ಲ. ಆದರೆ ಡಿಸೆಂಬರ್, ಜನವರಿಯಲ್ಲಿ ಸಾಲು-ಸಾಲಾಗಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಈ ಬಾರಿ ಡಿಸೆಂಬರ್ ತಿಂಗಳಲ್ಲಂತೂ ಚಿತ್ರಮಂದಿರಗಳಲ್ಲಿ ಹಬ್ಬವೇ ನಡೆಯಲಿದೆ.

1 / 7
ಕನ್ನಡದಲ್ಲಿ ಮೂರು ದೊಡ್ಡ ಸಿನಿಮಾಗಳು ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಮೊದಲಿಗೆ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಲಿರುವ ‘45’ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ.

2 / 7
ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಸಹ ಇದೇ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಸಹ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿದೆ.

3 / 7
ದರ್ಶನ್ ಜೈಲಿನಲ್ಲಿದ್ದರೂ ಸಹ ಅವರ ನಟನೆಯ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 11 ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಆಗಿ ಗಮನ ಸೆಳೆದಿದೆ.

4 / 7
‘ಡ್ಯೂಡ್‘, ‘ಲವ್ ಟುಡೆ’, ‘ಡ್ರ್ಯಾಗನ್’ ಸಿನಿಮಾಗಳ ಮೂಲಕ ಹ್ಯಾಟ್ರಿಕ್ ಸೂಪರ್ ಹಿಟ್ ನೀಡಿರುವ ಪ್ರದೀಪ್ ರಂಗನಾಥನ್ ನಟನೆಯ ‘ಲವ್ ಇನ್ಶುರೆನ್ಸ್ ಕಂಪೆನಿ’ ಸಿನಿಮಾ ಸಹ ಇದೇ ತಿಂಗಳು ಡಿಸೆಂಬರ್ 18ಕ್ಕೆ ತೆರೆಗೆ ಬರುತ್ತಿವೆ. ಇದರ ಜೊತೆಗೆ ಇನ್ನೂ ಕೆಲ ಸಿನಿಮಾಗಳು ಈ ತಿಂಗಳು ಬಿಡುಗಡೆ ಆಗಲಿದೆ.

5 / 7
ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಸಿನಿಮಾ ನಿನ್ನೆಯೇ (ಡಿಸೆಂಬರ್ 05) ಆದರೆ ಬಿಡುಗಡೆ ರದ್ದಾಗಿದ್ದು, ಇದೇ ತಿಂಗಳ ಅಂತ್ಯದಲ್ಲಿ ಅಂದರೆ ಕ್ರಿಸ್​​ಮಸ್ ವೇಳೆಗೆ ಬಿಡುಗಡೆ ಆಗುವ ಸಾಧ್ಯತೆ ಇದೆ.

6 / 7
ವಿಶ್ವದ ಅತ್ಯಂತ ಜನಪ್ರಿಯ ಸಿನಿಮಾ ಸರಣಿಗಳಲ್ಲಿ ಒಂದಾಗಿರುವ ‘ಅವತಾರ್’ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಇದೇ ಡಿಸೆಂಬರ್ 19ರಂದು ಬಿಡುಗಡೆ ಆಗಲಿದೆ.

7 / 7
ಕಾರ್ತಿಕ್ ಆರ್ಯನ್, ಅನನ್ಯಾ ಪಾಂಡೆ ಹಾಗೂ ಇತರರು ನಟಿಸಿರುವ ‘ತೂ ಮೇರಿ ಮೇ ತೆರಾ, ಮೇ ತೇರಿ, ತೂ ಮೇರ’ ಸಿನಿಮಾ ಸಹ ಇದೇ ತಿಂಗಳು ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.