AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 3ನೇ ಟಿ20ಯಲ್ಲಿ ಬುಮ್ರಾ ದಾಖಲೆ ಮುರಿಯುವ ತವಕದಲ್ಲಿ ಯಜುವೇಂದ್ರ ಚಹಲ್..!

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ T20I ನಲ್ಲಿ ಯುಜ್ವೇಂದ್ರ ಚಹಾಲ್ ಒಂದು ವಿಕೆಟ್ ಪಡೆಯುವ ಮೂಲಕ T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಆಗಲಿದ್ದಾರೆ.

ಪೃಥ್ವಿಶಂಕರ
|

Updated on:Feb 20, 2022 | 3:33 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಕ್ಲೀನ್ ಸ್ವೀಪ್ ಮಾಡಲಿದೆ. ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಕೊನೆಯ ಟಿ20 ಪಂದ್ಯ ಯುಜುವೇಂದ್ರ ಚಹಾಲ್‌ಗೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಚಾಹಲ್ ಭಾರತದ ನಂಬರ್ ಒನ್ ಟಿ20 ಬೌಲರ್ ಆಗುವ ಅವಕಾಶ ಪಡೆದಿದ್ದಾರೆ.

1 / 4
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ T20I ನಲ್ಲಿ ಯುಜ್ವೇಂದ್ರ ಚಹಾಲ್ ಒಂದು ವಿಕೆಟ್ ಪಡೆಯುವ ಮೂಲಕ T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್ ಆಗಲಿದ್ದಾರೆ. ಈ ವಿಷಯದಲ್ಲಿ ಅವರು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ. ಸದ್ಯ ಇಬ್ಬರೂ ಆಟಗಾರರ ಖಾತೆಯಲ್ಲಿ 66 ವಿಕೆಟ್‌ಗಳಿವೆ.

2 / 4
ಎರಡನೇ ಟಿ20 ಪಂದ್ಯದಲ್ಲಿ ಚಹಾಲ್ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಚಾಹಲ್ ಆರಂಭಿಕರಾದ ಕೈಲ್ ಮೈಯರ್ಸ್ ಅವರನ್ನು ಪೆವಿಲಿಯನ್​ಗೆ ಕಳುಹಿಸಿದರು. ಈ ವಿಕೆಟ್‌ನೊಂದಿಗೆ ಚಹಾಲ್ ಭಾರತದ ಪರ T20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಸರಿಗಟ್ಟಿದರು.

3 / 4
ಚಾಹಲ್ ಅವರ ಈ ಸರಣಿಯ ಬಗ್ಗೆ ಮಾತನಾಡುವುದಾದರೆ, ಅವರು ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದ್ದಾರೆ ಮತ್ತು ಎರಡೂ ಪಂದ್ಯಗಳಲ್ಲಿ 1-1 ವಿಕೆಟ್ ಪಡೆದಿದ್ದಾರೆ. ಕೊನೆಯ ಪಂದ್ಯದಲ್ಲೂ ಅವಕಾಶ ಸಿಕ್ಕರೆ ಬುಮ್ರಾ ಅವರನ್ನು ಸುಲಭವಾಗಿ ಹಿಂದಿಕ್ಕಲಿದ್ದಾರೆ. ಈ ಸರಣಿಯಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ಮರಳಲಿದ್ದಾರೆ.

4 / 4

Published On - 3:22 pm, Sun, 20 February 22