Kannada News Photo gallery India Medal in CWG 2022 Judokas Shushila, Vijay win silver and bronze; lifter Harjinder bags bronze
CWG 2022: ನಾಲ್ಕು ದಿನಗಳಲ್ಲಿ ಒಂಬತ್ತು ಪದಕ ಬಾಚಿಕೊಂಡ ಭಾರತ: ಇಲ್ಲಿದೆ ಸಂಪೂರ್ಣ ವಿವರ
TV9 Web | Updated By: ರಾಜೇಶ್ ದುಗ್ಗುಮನೆ
Updated on:
Aug 02, 2022 | 6:46 PM
Commonwealth Games 2022 Medal Tally: ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ (Commonwealth Games 2022) ಭಾರತ ಭರ್ಜರಿ ಪ್ರದರ್ಶನ ತೋರುತ್ತಿದೆ. ನಾಲ್ಕು ದಿನಗಳಲ್ಲಿ ಒಟ್ಟು ಒಂಬತ್ತು ಪದಕವನ್ನು ಬಾಜಿಕೊಂಡಿದೆ.
1 / 10
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ (Commonwealth Games 2022) ಭಾರತ ಭರ್ಜರಿ ಪ್ರದರ್ಶನ ತೋರುತ್ತಿದೆ. ನಾಲ್ಕು ದಿನಗಳಲ್ಲಿ ಒಟ್ಟು ಒಂಬತ್ತು ಪದಕವನ್ನು ಬಾಜಿಕೊಂಡಿದೆ. ಇದರಲ್ಲಿ ಮೂರು ಚಿನ್ನ, ಮೂರು ಬೆಳ್ಳಿ ಹಾಗೂ ಮೂರು ಕಂಚು ಪಡೆದುಕೊಂಡಿದ್ದಾರೆ. ವಿಶೇಷ ಎಂದರೆ ಭಾರತಕ್ಕೆ ಇದುವರೆಗೆ ಬಂದಿರುವ 9 ಪದಕಗಳ ಪೈಕಿ ಆರು ಪದಕಗಳು ವೇಟ್ ಲಿಫ್ಟಿಂಗ್ ನಿಂದಲೇ ಆಗಿದೆ.
2 / 10
ಭಾರತದ ಕಾಲ ಮಾನದ ಪ್ರಕಾರ ಸೋಮವರಾ ತಡರಾತ್ರಿ ವೇಟ್ ಲಿಫ್ಟರ್ ಹರ್ಜಿಂದರ್ ಕೌರ್ ಅವರು ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಮಹಿಳೆಯರ 71kg ವಿಭಾಗದಲ್ಲಿ ಒಟ್ಟು 212 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ ಕೌರ್ ಕಂಚಿಗೆ ಕೊರಳೊಡ್ಡಿದ್ದಾರೆ.
3 / 10
ಭಾರತದ ಎಲ್. ಸುಶೀಲಾ ದೇವಿ ಮತ್ತು ವಿಜಯ್ ಕುಮಾರ್ ಯಾದವ್ ಅವರು ಜೂಡೊ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದುಕೊಂಡರು.
4 / 10
ಭಾರತ ಪುರುಷರ ಹಾಕಿ ತಂಡ ತನ್ನ ಪೂಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವಿನ ಉತ್ತಮ ಅವಕಾಶವನ್ನು ಕಳೆದುಕೊಂಡು ಪಂದ್ಯವನ್ನು 4-4 ರಲ್ಲಿ ಡ್ರಾ ಮಾಡಿಕೊಂಡಿತು.
5 / 10
ಯುವ ವೇಟ್ ಲಿಫ್ಟರ್ ಅಚಿಂತಾ ಶೆಯುಲಿ ಅವರು ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಪುರುಷರ 73kg ವಿಭಾಗದಲ್ಲಿ ಒಟ್ಟು 313 ಕೆಜಿ ಭಾರ ಎತ್ತುವ ಮೂಲಕ ವಿಶೇಷ ಸಾಧನೆ ಮಾಡಿದ 20 ವರ್ಷದ ವೇಟ್ ಲಿಫ್ಟರ್ ಬಂಗಾರಕ್ಕೆ ಕೊರಳೊಡ್ಡಿದ್ದಾರೆ.
6 / 10
ಜೆರೆಮಿ ಲಾಲ್ರಿನ್ನುಂಗಾ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಮೀರಾಬಾಯಿ ಚಾನು ನಂತರ, ಜೆರೆಮಿ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 300 ಕೆ.ಜಿ. ತೂಕ ಎತ್ತುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.
7 / 10
ಮೀರಾಬಾಯಿ ಚಾನು ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟರು. ಚಾನು 49 ಕೆಜಿ ತೂಕ ವಿಭಾಗದಲ್ಲಿ ಒಟ್ಟು 201 ಕೆಜಿ ಭಾರ ಎತ್ತುವ ಮೂಲಕ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಸ್ನ್ಯಾಚ್ ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್ ನಲ್ಲಿ 113 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದು ದಾಖಲೆ ಕೂಡ ಮಾಡಿದರು.
8 / 10
ಸಂಕೇತ್ ಮಹಾದೇವ್ ಸಾಗರ್ ಕೂಡ ಪುರುಷರ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. 21 ವರ್ಷದ ಮಹಾರಾಷ್ಟ್ರ ಮೂಲದ ವೇಟ್ ಲಿಫ್ಟರ್ ಬರೋಬ್ಬರಿ 248 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
9 / 10
ಕರ್ನಾಟಕದ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಮಿಂಚಿದ್ದಾರೆ. ಇವರು ಈ ಬಾರಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪರವಾಗಿ ಪದಕ ಗೆದ್ದ ಎರಡನೇ ಕ್ರೀಡಾಪಟು. ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಪದಕಕ್ಕೆ ಕೊರಳೊಡ್ಡಿದ್ದಾರೆ.
10 / 10
55 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ. 114 ಕೆಜಿಯ ತನ್ನ ಎರಡನೇ ಕ್ಲೀನ್ ಮತ್ತು ಜರ್ಕ್ ಪ್ರಯತ್ನದಲ್ಲಿ ಬಿಂದ್ಯಾರಾಣಿ ವಿಫಲವಾದಾಗ ಕಂಚಿನ ಪದಕದ ನಿರೀಕ್ಷೆಯಿತ್ತು. ಆದರೆ, ಅಂತಿಮ ಲಿಫ್ಟ್ ನಲ್ಲಿ 116 ಕೆಜಿಯೊಂದಿಗೆ ಎರಡನೇ ಸ್ಥಾನಕ್ಕೇರಿದರು. ಈ ಮೂಲಕ ಬೆಳ್ಳಿ ಪದಕವನ್ನು ಬಾಜಿಕೊಂಡರು.
Published On - 10:21 am, Tue, 2 August 22