Updated on:Aug 28, 2022 | 6:11 PM
ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ತಮ್ಮ ಹೆಸರಿನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಸೇರಿದಂತೆ ಹಲವೆಡೆ ಇತಿಹಾಸ ಸೃಷ್ಟಿ ಮಾಡಿದ್ದಾರೆ. ಈಗ ಅವರು ತನ್ನ ಅತ್ಯಮೂಲ್ಯ ವಸ್ತುವನ್ನು ಒಳ್ಳೆಯ ಉದೇಶಕ್ಕಾಗಿ ದಾನ ನೀಡಿ ವಿಶ್ವದ ಗಮನ ಸೆಳೆದಿದ್ದಾರೆ.
ಕಳೆದ ವರ್ಷ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ನೀರಜ್, ಅದೇ ಈಟಿಯನ್ನು ಒಲಿಂಪಿಕ್ ಮ್ಯೂಸಿಯಂಗೆ ಕೊಡುಗೆಯಾಗಿ ನೀಡಿದ್ದಾರೆ.
ನೀರಜ್ ಕಳೆದ ವರ್ಷ ಟೋಕಿಯೊದಲ್ಲಿ ನಡೆದ ಟ್ರ್ಯಾಕ್ ಮತ್ತು ಫೀಲ್ಡ್ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಆಗಿದ್ದರು. ಈಗ ನೀರಜ್, ತನ್ನ ಅತ್ಯಂತ ಅಮೂಲ್ಯವಾದ ಈಟಿಯನ್ನು ವಸ್ತುಸಂಗ್ರಹಾಲಯಕ್ಕೆ ದಾನ ಮಾಡಿದ್ದಾರೆ.
ನೀರಜ್, ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಜಯಿಸಿದ್ದರು.
2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದ ರೈಫಲ್ ಅನ್ನು ಸಹ ಒಲಿಂಪಿಕ್ ಮ್ಯೂಸಿಯಂನಲ್ಲಿ ಇಡಲಾಗಿದೆ. ಅಲ್ಲದೆ 2008 ರಲ್ಲಿ, ಒಲಿಂಪಿಕ್ ಚಿನ್ನ ಗೆದ್ದಿದ್ದ ಬಿಂದ್ರಾ ಈ ಸಾಧನೆ ಮಾಡಿದ ಮೊದಲ ಭಾರತೀಯರಾಗಿದ್ದರು.
Published On - 6:11 pm, Sun, 28 August 22