ರಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಬ್ರಿಟನ್ ವಿರುದ್ಧ ವೀರೋಚಿತ ಆಟವಾಡಿ ಭಾರತ ಮಹಿಳಾ ಹಾಕಿ ತಂಡ 4-3 ಗೋಲುಗಳಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಒಲಿಂಪಿಕ್ಸ್ ಹಾಕಿಯಲ್ಲಿ ಚೊಚ್ಚಲ ಪದಲ ಗೆಲ್ಲುವ ಕನಸು ಈಡೇರಲಿಲ್ಲ. ಆದರೆ, ಸೋತರೂ ಕೋಟ್ಯಾಂತರ ಭಾರತೀಯರ ಮನ ಗೆದ್ದಿದ ರಾಣಿ ರಾಂಪಾಲ್ ಪಡೆ. ಪಂದ್ಯ ಆರಂಭವಾದ ಮೊದಲ ಕ್ವಾರ್ಟರ್ನಲ್ಲಿ ಉಭಯ ತಂಡಗಳಿಗೆ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ, ಎರಡನೇ ಕ್ವಾರ್ಟರ್ನ ಆರಂಭದಲ್ಲಿ ಭಾರತೀಯರು ಮಾಡಿದ ತಪ್ಪಿನಿಂದ ಬ್ರಿಟನ್ ಖಾತೆ ತೆರೆಯಿತು. ಇದರ ಬೆನ್ನಲ್ಲೆ ಭಾರತಕ್ಕೆ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿತಾದರೂ ಸರಿಯಾಗಿ ಉಪಯೋಗಿಸಿಕೊಂಡಿಲ್ಲ. ಇದರ ನಡುವೆ ಬ್ರಿಟನ್ ಮತ್ತೊಂದು ಗೋಲು ದಾಖಲಿಸಿ 2-0 ಮುನ್ನಡೆ ಸಾಧಿಸಿತು.