ಭಾರತೀಯ ಮಹಿಳಾ ಕ್ರಿಕೆಟ್ ಟಿ20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರು ಇಂದು 32 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಹರ್ಮನ್ಪ್ರೀತ್ ಕೌರ್ ಕ್ರಿಕೆಟ್ ಜಗತ್ತಿನಲ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಆಡಿದ 171 ರನ್ಗಳ ಇನಿಂಗ್ಸ್ಗಾಗಿ ಅಭಿಮಾನಿಗಳು ಅವರನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ.
1 / 5
2017 ರ ವಿಶ್ವಕಪ್ ಸೆಮಿಫೈನಲ್ನಲ್ಲಿ ಹರ್ಮನ್ಪ್ರೀತ್ ಕೌರ್ ಆಸ್ಟ್ರೇಲಿಯಾ ವಿರುದ್ಧ 171 ರನ್ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್ನಲ್ಲಿ ಅವರು ಸಿಕ್ಸರ್ಗಳ ಸುರಿ ಮಳೆ ಸುರಿಸಿದ್ದರು. ಅವರ ಈ ಇನ್ನಿಂಗ್ಸ್ ಅವರ ವೃತ್ತಿಜೀವನಕ್ಕೆ ಮಾತ್ರವಲ್ಲದೆ ಮಹಿಳಾ ಕ್ರಿಕೆಟ್ಗೂ ಸ್ಮರಣೀಯವಾಗಿದೆ.
2 / 5
ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಗೆಲುವ ಹಾಟ್ಫೆವರೆಟ್ ತಂಡವಾಗಿ ಪರಿಗಣಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 25 ಓವರ್ಗಳಲ್ಲಿ ಮೂರು ವಿಕೆಟ್ಗಳನ್ನು ಕಳೆದುಕೊಂಡು ಕೇವಲ 101 ರನ್ ಗಳಿಸಿತು. ಇದಾದ ನಂತರ ಹರ್ಮನ್ಪ್ರೀತ್ ಕೌರ್ ಕ್ರೀಸ್ಗೆ ಬಂದು ಅದ್ಭುತ ಇನ್ನಿಂಗ್ಸ್ ಆಡಿದರು.
3 / 5
ಹರ್ಮನ್ಪ್ರೀತ್ ಕೌರ್ ತನ್ನ ಸ್ಫೋಟಕ ಇನ್ನಿಂಗ್ಸ್ನಲ್ಲಿ ಒಟ್ಟು 7 ಸಿಕ್ಸರ್ಗಳನ್ನು ಬಾರಿಸಿದರು. ಇದರೊಂದಿಗೆ ಹರ್ಮನ್ಪ್ರೀತ್ ಭಾರತ ಪರ ಏಕದಿನ ಪಂದ್ಯದ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ದಾಖಲೆ ನಿರ್ಮಿಸಿದರು.
4 / 5
ಹರ್ಮನ್ಪ್ರೀತ್ ಅವರ ಈ ಇನ್ನಿಂಗ್ಸ್, ಮಹಿಳಾ ವಿಶ್ವಕಪ್ ನಾಕೌಟ್ ಪಂದ್ಯದ ಅತಿದೊಡ್ಡ ಇನ್ನಿಂಗ್ಸ್ ಆಗಿದೆ. ಅವರ ಇನ್ನಿಂಗ್ಸ್ನಿಂದಾಗಿ ಭಾರತ 42 ಓವರ್ಗಳ ಪಂದ್ಯದಲ್ಲಿ 4 ವಿಕೆಟ್ಗೆ 281 ರನ್ ಗಳಿಸಿತ್ತು. ಆಸ್ಟ್ರೇಲಿಯಾದ ಇಡೀ ತಂಡ 245 ರನ್ಗಳಿಗೆ ಆಲ್ಔಟಾಯಿತು.