Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೀಗ ಖರೀದಿಗೆ ಸಿಗುತ್ತಿದೆ 108MP ಕ್ಯಾಮೆರಾದ ಇನ್ಫಿನಿಕ್ಸ್ ಜಿರೋ 30 5G ಫೋನ್: ಆಫರ್ ಏನಿದೆ?

Infinix Zero 30 5G Sale Started in India: 108-ಮೆಗಾಪಿಕ್ಸೆಲ್ ಕ್ಯಾಮೆರಾ, ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC, ಬಲಿಷ್ಠ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಕೂಡ ಇರುವ ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್​ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮೊದಲ ಸೇಲ್ ಕಾಣುತ್ತಿದೆ. ಇದರ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

Vinay Bhat
|

Updated on: Sep 05, 2023 | 2:16 PM

ಚೀನಾದ ಟ್ರಾನ್ಸ್‌ಷನ್ ಹೋಲ್ಡಿಂಗ್ಸ್ ಒಡೆತನದ ಪ್ರಸಿದ್ಧ ಇನ್ಫಿನಿಕ್ಸ್ ಕಂಪನಿ ಕಳೆದ ವಾರ ಭಾರತದಲ್ಲಿ ಇನ್ಫಿನಿಕ್ಸ್ ಜಿರೋ 30 5G (Infinix Zero 30 5G) ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದು ಇನ್ಫಿನಿಕ್ಸ್ ಜಿರೋ 20 ಫೋನಿನ ಉತ್ತರಾಧಿಕಾರಿ ಆಗಿದೆ. ಇದೀಗ ಈ ಫೋನ್ ಭಾರತದಲ್ಲಿ ಖರೀದಿಗೆ ಸಿಗುತ್ತಿದೆ.

1 / 8
ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್​ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ನಲ್ಲಿ ರನ್ ಆಗುತ್ತದೆ. 108-ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಜೊತೆಗೆ ಬಲಿಷ್ಠ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಕೂಡ ಇರುವ ಈ ಫೋನ್ ಮೊದಲ ಸೇಲ್ ಕಾಣುತ್ತಿದೆ. ಇದರ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

2 / 8
ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್​ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯನ್ನು ರಿಲೀಸ್ ಆಗಿತ್ತು. ಇದರ ಬೇಸ್ ಮಾಡೆಲ್ 8GB RAM + 128GB ಸ್ಟೋರೇಜ್ ಮಾದರಿಗೆ 23,999 ರೂ. ಇದೆ. ಅಂತೆಯೆ 12GB RAM + 256GB ಸಂಗ್ರಹಣೆಯ ಟಾಪ್-ಎಂಡ್ ರೂಪಾಂತರಕ್ಕೆ 24,999 ರೂ. ನಿಗದಿ ಮಾಡಲಾಗಿದೆ. ಈ 5G ಹ್ಯಾಂಡ್‌ಸೆಟ್ ಅನ್ನು ಗೋಲ್ಡನ್ ಅವರ್ ಮತ್ತು ರೋಮ್ ಗ್ರೀನ್ ಬಣ್ಣ ಆಯ್ಕೆಗಳಲ್ಲಿ ನೀಡಲಾಗಿದೆ.

3 / 8
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್​ಫೋನ್ ಖರೀದಿಗೆ ಸಿಗುತ್ತಿದೆ. ವಿಶೇಷ ಆಫರ್ ಘೋಷಣೆ ಮಾಡಲಾಗಿದ್ದು, ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಈ ಫೋನನ್ನು ಗ್ರಾಹಕರು 2,000 ರೂ. ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು.

4 / 8
ಡ್ಯುಯಲ್ ಸಿಮ್ (ನ್ಯಾನೋ) ಇನ್ಫಿನಿಕ್ಸ್ ಜಿರೋ 30 5G ಆಂಡ್ರಾಯ್ಡ್ 13 -ಆಧಾರಿತ XOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. 6.78-ಇಂಚಿನ ಪೂರ್ಣ-HD+ (2,400×1,080 ಪಿಕ್ಸೆಲ್‌ಗಳು) 60-ಡಿಗ್ರಿ ಕರ್ವ್ಡ್ AMOLED ಡಿಸ್ ಪ್ಲೇ ಜೊತೆಗೆ 144Hz ರಿಫ್ರೆಶ್ ದರ ಹೊಂದಿದೆ. ಈ ಹ್ಯಾಂಡ್‌ಸೆಟ್ ಎರಡೂ ಬದಿಗಳಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 ಪ್ರೊಸೆಸರ್ ನೀಡಲಾಗಿದ್ದು, 12GB RAM ವರೆಗೆ ಇರುತ್ತದೆ. ಆನ್‌ಬೋರ್ಡ್ ಮೆಮೊರಿಯನ್ನು 21GB ವರೆಗೆ ವಿಸ್ತರಿಸಬಹುದು.

5 / 8
ಕ್ಯಾಮೆರಾ ವಿಚಾರಕ್ಕೆ ಬಂದರೆ, ಈ ಫೋನ್​ನಲ್ಲಿ ಕ್ವಾಡ್ LED ಫ್ಲ್ಯಾಶ್‌ನೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅಳವಡಿಸಲಾಗಿದೆ. OIS ಬೆಂಬಲದೊಂದಿಗೆ 108-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 13-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು 2-ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. 50-ಮೆಗಾಪಿಕ್ಸೆಲ್​ನ ಸೆಲ್ಫಿ ಕ್ಯಾಮೆರಾ ಇದರಲ್ಲಿದ್ದು, ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಇದು ಬರುತ್ತದೆ. ಮುಂಭಾಗದ ಕ್ಯಾಮೆರಾ ಪ್ರತಿ ಸೆಕೆಂಡಿಗೆ 60 ಫ್ರೇಮ್‌ಗಳಲ್ಲಿ 4K ವಿಡಿಯೋ ರೆಕಾರ್ಡ್ ಮಾಡುತ್ತಂತೆ.

6 / 8
ಇನ್ಫಿನಿಕ್ಸ್ ಜಿರೋ 30 5G 68W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡಿದೆ. ಈ ವೇಗದ ಚಾರ್ಜಿಂಗ್ ತಂತ್ರಜ್ಞಾನವು ಕೇವಲ 30 ನಿಮಿಷಗಳಲ್ಲಿ ಶೂನ್ಯದಿಂದ 80 ಪ್ರತಿಶತದಷ್ಟು ಬ್ಯಾಟರಿಯನ್ನು ತುಂಬುತ್ತದೆ ಎಂದು ಕಂಪನಿ ಹೇಳಿದೆ.

7 / 8
ಕನೆಕ್ಟಿವಿಟಿ ಆಯ್ಕೆಗಳು 5G, NFC, GPS, USB ಟೈಪ್-C ಪೋರ್ಟ್, ಬ್ಲೂಟೂತ್ 5.3, ಮತ್ತು Wi-Fi 6 ಅನ್ನು ಒಳಗೊಂಡಿವೆ. ದೃಢೀಕರಣಕ್ಕಾಗಿ ಇನ್-ಡಿಸ್ ಪ್ಲೇ ಫಿಂಗರ್​ಪ್ರಿಂಟ್ ಆಯ್ಕೆ ಇದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP53-ರೇಟೆಡ್ ಬಿಲ್ಡ್ ಅನ್ನು ಹೊಂದಿದೆ.

8 / 8
Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ