ತಿರುಪತಿ ತಿಮ್ಮಪ್ಪನಿಗೆ 42 ಲಕ್ಷ ವೆಚ್ಚದ ಧರ್ಮರಥ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ
ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿಯವರು ಇಂದು ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 42ಲಕ್ಷ ವೆಚ್ಚದ ಧರ್ಮ ರಥ ವಾಹನ ಕೊಡುಗೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮ ರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.