- TV9 Kannada Photo gallery Intercity bus Accident in yellapur national highway 63 driver dies More than 25 people were injured
ಯಲ್ಲಾಪುರ ಬಳಿ ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ; 25ಕ್ಕೂ ಹೆಚ್ಚು ಮಂದಿಗೆ ಗಾಯ
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಪಘಾತಕ್ಕೀಡಾಗಿದೆ. ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
Updated on:Jul 22, 2023 | 11:07 AM
Share

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
1 / 5

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.
2 / 5

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
3 / 5

ಅಪಘಾತಗೊಂಡ ಬಸ್ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
4 / 5

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದ ಭೀಕರ ಅಪಘಾತಕ್ಕೆ ಮಳೆ, ಕೆಸರು ತುಂಬಿದ ರಸ್ತೆ ಹಾಗೂ ವಿದ್ಯುತ್ ತಂತಿಗಳು ಕಾರಣ ಎಂದು ತಿಳಿದು ಬಂದಿದೆ.
5 / 5
Published On - 10:14 am, Sat, 22 July 23
Related Photo Gallery
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ
12 ರಾಶಿಗಳ ಇಂದಿನ ಫಲ ಇಲ್ಲಿದೆ



