
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತಗೊಂಡ ಬಸ್ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದ ಭೀಕರ ಅಪಘಾತಕ್ಕೆ ಮಳೆ, ಕೆಸರು ತುಂಬಿದ ರಸ್ತೆ ಹಾಗೂ ವಿದ್ಯುತ್ ತಂತಿಗಳು ಕಾರಣ ಎಂದು ತಿಳಿದು ಬಂದಿದೆ.
Published On - 10:14 am, Sat, 22 July 23