ಕೊನೆಯ ಸಭೆ ಕರೆದು ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ ಹಂಗಾಮಿ ಸಿಎಂ ಬೊಮ್ಮಾಯಿ

Updated on: May 16, 2023 | 1:39 PM

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಿಎಂ ಸ್ಥಾನಕ್ಕೆ ಮೊನ್ನೇ ಅಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಹಂಗಾಮಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಇಂದು(ಮೇ 16) ಹಿರಿಯ ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಸಿದರು. ಕೊನೆ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ್ದಾರೆ.

1 / 6
ರಾಜ್ಯ ವಿಧಾನಭೆ ಚುನಾವಣೆ ಫಲಿತಾಂಶದ ಬಳಿಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ರಾಜ್ಯ ವಿಧಾನಭೆ ಚುನಾವಣೆ ಫಲಿತಾಂಶದ ಬಳಿಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

2 / 6

ಬಸವರಾಜ ಬೊಮ್ಮಾಯಿ

3 / 6

ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದ್ದಾರೆ.

4 / 6

ಕೋವಿಡ್, ಪ್ರವಾಹ ಸಂದರ್ಭದಲ್ಲಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿರುವ ಬಗ್ಗೆ ಮಾತನಾಡಿದರು.

5 / 6

ಸಭೆ ಬಳಿಕ ಅಧಿಕಾರಿಗಳಿಗೆ ಕೈ ಮುಗಿದು ಹೊರಟ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ

6 / 6

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವು ಐಎಎಸ್, ಐಪಿಎಸ್​ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Published On - 1:37 pm, Tue, 16 May 23

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us