ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ!

ಬಿ ಮೂರ್ತಿ, ನೆಲಮಂಗಲ Edited By:

Updated on: Oct 26, 2023 | 1:31 PM

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

1 / 8
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು(international Women kabaddi player) ಆತ್ಮಹತ್ಯೆ (Suicide)ಮಾಡಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು(international Women kabaddi player) ಆತ್ಮಹತ್ಯೆ (Suicide)ಮಾಡಿಕೊಂಡಿದ್ದಾರೆ.

2 / 8

ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಯುವತಿ ಧನಲಕ್ಷ್ಮೀ(25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

3 / 8

ಮೊನ್ನೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಗೊಂಡ ತಂದೆ ರೂಮ್​ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

4 / 8

ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿಯಾಗಿರುವ ಧನಲಕ್ಷ್ಮೀ, ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

5 / 8

ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

6 / 8

ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ತನ್ನಷ್ಟಕ್ಕೆ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

7 / 8

ಮೊನ್ನೇ ಅಷ್ಟೇ ಮೈಸೂರು ಸುತ್ತಾಡಿ ಬಂದಿದ್ದ ಧನಲಕ್ಷ್ಮೀ ಏಕಾಏಕಿ ಇಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಕೆಗೆ ಕಾರಣವಾಗಿದೆ,

8 / 8

ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Loading...
Unable to load recommendations.
Follow Us