ಇಂದು (ಜೂ.21) ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಸುದೈವ ಕುಟಂಬಂ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.
ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದರು. ಅಲ್ಲದೇ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಯೋಗಪಟು, ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಠದ ದೇವರ ಗರ್ಭಗುಡಿಯ ಮುಂಭಾಗ ಯೋಗಾಸನ ಮಾಡಿದರು.
ಕಲಬುರಗಿ ಜಿಲ್ಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಕಲಬುರಗಿ ತಾಲೂಕಿನ ನಂದಿಕೂರು ಗ್ರಾ.ಪಂ ಸದಸ್ಯ ಪವನ್ ಕುಮಾರ ವಳಕೇರಿ ಅವರು ಬಾವಿಯಲ್ಲಿ ಸತತ ಎರಡು ಗಂಟೆಗೂ ಅಧಿಕ ಜಲಯೋಗಾಸನ ಮಾಡಿದರು.
ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆ ಅಧಿಕಾರಿಗಳು, ಸಿಬ್ಬಂದಿ, ಎನ್ಸಿಸಿ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. 200ಕ್ಕೂ ಅಧಿಕ ನೌಕಾನೆಲೆ ಸಿಬ್ಬಂದಿಯಿಂದ ಏಕಕಾಲಕ್ಕೆ ಯೋಗಾಸನ ಮಾಡಿದರು. ಇದೇ ಮೊದಲಬಾರಿಗೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆಯಿಂದ ಯೋಗ ಕಾರ್ಯಕ್ರಮ ನಡೆದಿದೆ.
ಬೆಂಗಳೂರಿನ ಹಲಸೂರಿನ ಸೇನಾ ಎಂಇಜಿ ಅಂಡ್ ಸೆಂಟರ್ನಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಸುಮಾರು ಐದುನೂರಕ್ಕು ಹೆಚ್ಚು ಸೇನಾ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.
ಕರ್ನಾಟಕ ನೌಕಾ ಪ್ರದೇಶ ಪ್ರಧಾನ ಕಛೇರಿಯಲ್ಲಿ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ನೌಕಾ ಸಿಬ್ಬಂದಿ ಯೋಗಾಸನ ಮಾಡಿದ ಚಿತ್ರ.
ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ, ಧನ್ಯಸ್ಮಿ ಯೋಗ ಕೇಂದ್ರ ಸಹಯೋಗದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗಿಯಾಗಿದ್ದರು.
ಅರಮನೆಯಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ಆಚರಣೆ ಆಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಹಾಗೂ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದರು.
ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯೋಗಪಟುಗಳು ಭಾಗಿಯಾಗಿದ್ದರು.
ವಿಜಯಪುರ ನಗರದ ಡಾ ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕರು, ಸಚಿವರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಮ್ಮ 91ನೇ ವಯಸ್ಸನಲ್ಲೂ ಕೂಡ ಯೋಗಾಸನ ಮಾಡಿದರು.
Published On - 11:59 am, Wed, 21 June 23