International Yoga Day 2023: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯೋಗ ದಿನಾಚರಣೆ ಆಚರಿಸಿದ್ದು ಹೇಗೆ? ಇಲ್ಲಿದೆ ಫೋಟೋಸ್​

ಇಂದು (ಜೂ.21) ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆವತಿಯಿಂದ ವಿಧಾನಸೌಧದ ‌ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಸುದೈವ ಕುಟಂಬಂ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.

ವಿವೇಕ ಬಿರಾದಾರ
|

Updated on:Jun 21, 2023 | 12:13 PM

International Yoga Day 2023: Karnataka various district international yoga day celebration here is the photos

ಇಂದು (ಜೂ.21) ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆವತಿಯಿಂದ ವಿಧಾನಸೌಧದ ‌ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ವಸುದೈವ ಕುಟಂಬಂ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು.

1 / 13
International Yoga Day 2023: Karnataka various district international yoga day celebration here is the photos

ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದರು. ಅಲ್ಲದೇ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

2 / 13
International Yoga Day 2023: Karnataka various district international yoga day celebration here is the photos

ಯೋಗಪಟು, ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಠದ ದೇವರ ಗರ್ಭಗುಡಿಯ ಮುಂಭಾಗ ಯೋಗಾಸನ ಮಾಡಿದರು.

3 / 13
International Yoga Day 2023: Karnataka various district international yoga day celebration here is the photos

ಕಲಬುರಗಿ ಜಿಲ್ಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಕಲಬುರಗಿ ತಾಲೂಕಿನ ನಂದಿಕೂರು ಗ್ರಾ.ಪಂ ಸದಸ್ಯ ಪವನ್ ಕುಮಾರ ವಳಕೇರಿ ಅವರು ಬಾವಿಯಲ್ಲಿ ಸತತ ಎರಡು ಗಂಟೆಗೂ ಅಧಿಕ ಜಲಯೋಗಾಸನ ಮಾಡಿದರು.

4 / 13
International Yoga Day 2023: Karnataka various district international yoga day celebration here is the photos

ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆ ಅಧಿಕಾರಿಗಳು, ಸಿಬ್ಬಂದಿ, ಎನ್‌ಸಿಸಿ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. 200ಕ್ಕೂ ಅಧಿಕ ನೌಕಾನೆಲೆ ಸಿಬ್ಬಂದಿಯಿಂದ ಏಕಕಾಲಕ್ಕೆ ಯೋಗಾಸನ ಮಾಡಿದರು. ಇದೇ ಮೊದಲಬಾರಿಗೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ನೌಕಾನೆಲೆಯಿಂದ ಯೋಗ ಕಾರ್ಯಕ್ರಮ ನಡೆದಿದೆ.

5 / 13
International Yoga Day 2023: Karnataka various district international yoga day celebration here is the photos

ಬೆಂಗಳೂರಿನ ಹಲಸೂರಿನ ಸೇನಾ ಎಂಇಜಿ ಅಂಡ್ ಸೆಂಟರ್​ನಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಸುಮಾರು ಐದುನೂರಕ್ಕು ಹೆಚ್ಚು ಸೇನಾ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.

6 / 13
International Yoga Day 2023: Karnataka various district international yoga day celebration here is the photos

ಕರ್ನಾಟಕ ನೌಕಾ ಪ್ರದೇಶ ಪ್ರಧಾನ ಕಛೇರಿಯಲ್ಲಿ ಐಎನ್ಎಸ್​ ವಿಕ್ರಮಾದಿತ್ಯದಲ್ಲಿ ನೌಕಾ ಸಿಬ್ಬಂದಿ ಯೋಗಾಸನ ಮಾಡಿದ ಚಿತ್ರ.

7 / 13
International Yoga Day 2023: Karnataka various district international yoga day celebration here is the photos

ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ಕ್ಷಮತಾ ಸೇವಾ ಸಂಸ್ಥೆ, ಧನ್ಯಸ್ಮಿ ಯೋಗ ಕೇಂದ್ರ ಸಹಯೋಗದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭಾಗಿಯಾಗಿದ್ದರು.

8 / 13
International Yoga Day 2023: Karnataka various district international yoga day celebration here is the photos

ಅರಮನೆಯಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಸಂಸದ ಪ್ರತಾಪ್​ ಸಿಂಹ ಭಾಗಿಯಾಗಿದ್ದರು.

9 / 13
International Yoga Day 2023: Karnataka various district international yoga day celebration here is the photos

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ಆಚರಣೆ ಆಯೋಜಿಸಲಾಗಿತ್ತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಹಾಗೂ ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದರು.

10 / 13
International Yoga Day 2023: Karnataka various district international yoga day celebration here is the photos

ರಾಯಚೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯೋಗಪಟುಗಳು ಭಾಗಿಯಾಗಿದ್ದರು.

11 / 13
International Yoga Day 2023: Karnataka various district international yoga day celebration here is the photos

ವಿಜಯಪುರ ನಗರದ ಡಾ ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕರು, ಸಚಿವರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

12 / 13
International Yoga Day 2023: Karnataka various district international yoga day celebration here is the photos

ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ತಮ್ಮ 91ನೇ ವಯಸ್ಸನಲ್ಲೂ ಕೂಡ ಯೋಗಾಸನ ಮಾಡಿದರು.

13 / 13

Published On - 11:59 am, Wed, 21 June 23

Follow us
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ