ಇಂದು (ಜೂ.21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಭಾರತದಲ್ಲಿ 2 ಸಾವಿರಕ್ಕೂ ಅಧಿಕ ವರ್ಷಗಳಿಂದ ಯೋಗ ರೂಢಿಯಲ್ಲಿದೆ. 10 ವರ್ಷಗಳಿಂದೀಚೆಗೆ ಪುರಾತನ ಯೋಗ ಗ್ಲೋಬಲ್ ಯೋಗವಾಗಿ ಬೆಳೆದಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲಯಲ್ಲಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್‌ನ ಬಸವೇಶ್ವರ ನಗರದ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದರು. ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಸಚಿವ ಸಂತೋಷ ಲಾಡ್, ಸಂಸದ ತುಕಾರಾಂ, ನಟಿ ಶ್ರೀಲೀಲಾ ಅವರು ಭಾಗಿಯಾಗಿದ್ದರು.
ವಿಧಾನಸೌಧದ ಮುಂಭಾಗ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಈ ಯೋಗ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನಸಭೆ ಸಭಾಪತಿ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಭಾಗಿಯಾಗಿದ್ದರು.
10ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಸಚಿವಾಲಯದ ವತಿಯಿಂದ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಟೌನ್ ಶಿಪ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
91 ವರ್ಷದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಯೋಗಾಸನ. ಪುರಾತನವಾದ ಭಾರತೀಯ ಯೋಗಾಭ್ಯಾಸವು ಆರೋಗ್ಯ ಮತ್ತು ಮಾನಸಿಕ ಚುರುಕುತನ ಹೆಚ್ಚಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಯೋಗಾಚರಣೆ ಆಚರಿಸಲಾಯಿತು. ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ ಅವರು ಉದ್ಘಾಟಿಸಿದರು. ಯೋಗಾಭ್ಯಾಸದಲ್ಲಿ ಜಿಲ್ಲಾಧಿಕಾರಿ ಕೆಎಮ್ ಜಾನಕಿ, ಎಸ್ಪಿ ಅಮರನಾಥ ರೆಡ್ಡಿ ಸೇರಿದಂತೆ ನಗರದ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದ ಸಾರ್ವಜನಿಕರು ಭಾಗಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಎಂ.ಸಿ.ಸುಧಾಕರ್, ಸಂಸದ ಕೆ.ಸುಧಾಕರ್ ಭಾಗಿಯಾಗಿ ಯೋಗ ಮಾಡಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ದಿನಾಚರಣೆ ನೆರವೇರಿತು. ಮೈಸೂರು ಅರಮನೆಯಲ್ಲಿ ಯೋಗ ಪಟುಗಳು ವಿವಿಧ ಆಸನಗಳನ್ನು ಮಾಡಿದರು. ಇವರೊಂದಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಯೋಗ ಮಾಡಿದರು. ಜೊತೆಗೆ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಶಾಸಕ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೇರಿ ಹಲವರು ಭಾಗಿಯಾಗಿದ್ದರು.
ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಯೋಗ ಒಕ್ಕೂಟ ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಸಿರಿಗೆರೆ ಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಹಲವರು ಯೋಗ ಮಾಡಿದರು. ಸಾವಿರಾರು ಯೋಗಪಟುಗಳು ಸೇರಿದಂತೆ ಶಾಲಾ ಮಕ್ಕಳು ಭಾಗಿಯಾಗಿದ್ದರು.
Published On - 9:54 am, Fri, 21 June 24