International Yoga Day: ಚಿಕ್ಕಬಳ್ಳಾಪುರ ಆದಿಯೋಗಿ ಸಮ್ಮುಖದಲ್ಲಿ ಯೋಗ ದಿನಾಚರಣೆ ಹೀಗಿತ್ತು ನೋಡಿ

ಅಂತರರಾಷ್ಟ್ರೀಯ ಯೋಗ ದಿನ 2024: ಸದ್ಗುರು ಸನ್ನಿಧಿ ಚಿಕ್ಕಬಳ್ಳಾಪುರದ ಆದಿಯೋಗಿಯ ಸಮ್ಮುಖದಲ್ಲಿ ಜೂನ್ 21 ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೃಹತ್ ಯೋಗ ಕಾರ್ಯಕ್ರಮ ನಡೆಯಿತು. ಆದಿಯೋಗಿ ಸಮ್ಮುಖದಲ್ಲಿ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಸೈನಿಕರು, ಮದ್ರಾಸ್ ಸ್ಯಾಪರ್ಸ್, ಬಿಎಸ್‌ಎಫ್, ಸ್ಥಳೀಯ ಗ್ರಾಮಸ್ಥರು ಶುಕ್ರವಾರ ಯೋಗಾಭ್ಯಾಸ ಮಾಡಿದರು.

|

Updated on: Jun 22, 2024 | 1:38 PM

ಏರ್ ಕಮೋಡೋರ್ ಎಸ್​​​ಬಿ ಅರುಣ್ ಕುಮಾರ್ ವಿಎಸ್ಎಂ, ಡೆಪ್ಯುಟಿ ಡೈರೆಕ್ಟರ್ ಜನರಲ್, ಕರ್ನಾಟಕ ಮತ್ತು ಗೋವಾ ಏನ್ ಸಿಸಿ ಡೈರೆಕ್ಟರೇಟ್ ಮತ್ತು ಪ್ರಸಿದ್ಧ ನಟಿ ಹಾಗು ಮಾಡೆಲ್ ಶ್ರೀನಿಧಿ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದರು.

1 / 6
ಚಿಕ್ಕಬಳ್ಳಾಪುರದ 20 ಕಾಲೇಜುಗಳ 5 ಕರ್ನಾಟಕ ಬೆಟಾಲಿಯನ್‌ನ ಸುಮಾರು 1,000 ಎನ್‌ಸಿಸಿ ಕೆಡೆಟ್‌ಗಳು, ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಕೋರ್ (ಎಂಇಜಿ)ನ 200 ಸೈನಿಕರು, ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಉಪ ತರಬೇತಿ ಕೇಂದ್ರ (ಎಸ್‌ಟಿಸಿ)ದ 120 ಜವಾನರು ಮತ್ತು 2 ಅಧಿಕಾರಿಗಳು ಆದಿಯೋಗಿಯ ಸಮ್ಮುಖದಲ್ಲಿ ಈಶ ಹಠಯೋಗ ಶಿಕ್ಷಕರು ನಡೆಸಿದ ಯೋಗ ಸೆಷಸ್​​​ಗಳಲ್ಲಿ ಪಾಲ್ಗೊಂಡರು.

2 / 6
ಏರ್ ಕಾಮೋಡರ್ ಎಸ್​​ಬಿ ಅರುಣ್ ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ದೇಶದ ಎಲ್ಲ ಜನರೂ, ಮುಖ್ಯವಾಗಿ ಯುವಪೀಳಿಗೆ ಯೋಗವನ್ನು ತಮ್ಮ ಜೀವನಶೈಲಿಯನ್ನಾಗಿ ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಯೋಗ ಕೇವಲ ಶಾರೀರಿಕ ವ್ಯಾಯಾಮವಲ್ಲ, ಬದಲಿಗೆ ದೇಹ ಮತ್ತು ಮನಸ್ಸನ್ನು ಪುನಶ್ಚೇತನಗೊಳಿಸುವ ಒಂದು ಪರಿಪೂರ್ಣ ಅಭ್ಯಾಸ ಎಂದು ಅವರು ಹೇಳಿದರು.

3 / 6
ಜಗತ್ತಿನೆಲ್ಲೆಡೆ ನಾವೆಲ್ಲರೂ ಒಬ್ಬರಿಗೊಬ್ಬರು ಬೆಸೆದುಕೊಂಡಿದ್ದೇವೆ ಮತ್ತು, ಯೋಗದ ಮೂಲಕ, ನಾವು ನಮ್ಮಲ್ಲಿನ ತಡೆಗೋಡೆಗಳನ್ನು ಮುರಿದು, ವಿಶ್ವವನ್ನೇ ಒಂದು ಕುಟುಂಬವನ್ನಾಗಿ ಮಾಡಬಹುದು. ಯೋಗ, ಶಿಸ್ತು ಮತ್ತು ಏಕಾಗ್ರತೆಯನ್ನು ತರುತ್ತದೆ. ವಿದ್ಯಾರ್ಥಿ ಮತ್ತು ಎನ್​​ಸಿಸಿ ಪಡೆಗೆ ಈ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ತಮ್ಮೆಲ್ಲ ಚಟುವಟಿಕೆಗಳಲ್ಲಿ ಸಹಾಯವಾಗುತ್ತದೆ ಎಂದು ಏರ್ ಕಾಮೋಡರ್ ಎಸ್​​ಬಿ ಅರುಣ್ ಕುಮಾರ್ ಹೇಳಿದರು.

4 / 6
ಕೆಜಿಎಫ್ ಸಿನೆಮಾದ ಜನಪ್ರಿಯ ನಟಿ ಶ್ರೀನಿಧಿ ಶೆಟ್ಟಿ ಮಾತನಾಡಿ, ಏನು ಸರಿ, ಏನು ತಪ್ಪು, ಏನು ಮಾಡಬೇಕು, ಏನು ಮಾಡಬಾರದು ಎಂಬುದು ನಮಗೆಲ್ಲರಿಗೂ ತಿಳಿದಿದೆ. ನಾವು ಕೇವಲ ಕಾರ್ಯಪ್ರವೃತ್ತರಾಗಬೇಕು ಅಷ್ಟೇ ಎಂದರು. ಪರಿಸರ ಮಾಲಿನ್ಯದಿಂದಾಗಿ, ಜನರು ತಮ್ಮ ಆರೋಗ್ಯ ಮತ್ತು ಯೋಗಕ್ಷೇಮ ಹೆಚ್ಚಿಸಲು ಆಂತರಿಕವಾಗಿ ತಿರುಗುವುದು ಅನಿವಾರ್ಯ. ನಾವು ಉಸಿರಾಡುವ ಗಾಳಿ, ನಡೆಯುವ ಮಣ್ಣು, ಕುಡಿಯುವ ನೀರು, ಎಲ್ಲವೂ ಕ್ಷೀಣಿಸಿದೆ. ‘ಆಂತರಿಕವಾಗಿ ಆನಂದದಿಂದಿರಲು’ ಯೋಗದ ನಿಯಮಿತ ಅಭ್ಯಾಸವನ್ನು ಕೈಗೊಳ್ಳುವಂತೆ ಜನರಲ್ಲಿ ಕೇಳಿಕೊಂಡರು.

5 / 6
ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ಸದ್ಗುರು ಸನ್ನಿಧಿಯಲ್ಲಿರುವ ಸಮುದಾಯ ಯೋಗ ಹಾಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಇಂದಿನಿಂದ ಈ ಹಾಲ್ ನಲ್ಲಿ ಸಾರ್ವಜನಿಕರಿಗೆ ಪ್ರತಿದಿನ ಉಚಿತ ಯೋಗ ಸೆಷನ್ ನಡೆಸಲಾಗುತ್ತದೆ. ಈಶದ ಹಠ ಯೋಗ ಶಿಕ್ಷಕರು ಪ್ರತಿದಿನ ವರ್ಷಪೂರ್ತಿ ಬೆಳಿಗ್ಗೆ 10:30 ರಿಂದ ಸಂಜೆ 6:00 ರವರೆಗೆ 30 ನಿಮಿಷಗಳ ಸೆಷನ್ ನಡೆಸುತ್ತಾರೆ. ಈ ಸೆಷನ್​​​ಗಳು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಡೆಯಲಿವೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ

ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ

ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು

ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್

ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್