ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಜೇಯ ಅರ್ಧಶತಕ ಗಳಿಸುವ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ತಮ್ಮ 6000 ರನ್ಗಳನ್ನು ಪೂರ್ಣಗೊಳಿಸಿದರು. 6000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಕ್ರಿಸ್ ಮೋರಿಸ್ ಅವರ ಎಸೆತಕ್ಕೆ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದರು. ಈ ಪಂದ್ಯದ ಮೊದಲು, ಕೊಹ್ಲಿ ಅವರ ಹೆಸರಿನಲ್ಲಿ 5,946 ರನ್ ಗಳಿದ್ದವು.