IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್
TV9 Web | Updated By: ಝಾಹಿರ್ ಯೂಸುಫ್
Updated on:
Jan 26, 2022 | 3:35 PM
IPL 2022 Mega Auction: 2019 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ರಬಾಡ 12 ಪಂದ್ಯಗಳಲ್ಲಿ 25 ವಿಕೆಟ್ ಉರುಳಿಸಿದ್ದರು. ಇನ್ನು 2020 ರಲ್ಲಿ 30 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರು.
1 / 7
ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15 ನೇ ಆವೃತ್ತಿಯ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈಗಾಗಲೇ 10 ತಂಡಗಳು ಒಟ್ಟು 33 ಆಟಗಾರರನ್ನು ಉಳಿಸಿಕೊಂಡಿದೆ. ಇನ್ನುಳಿದ ಆಟಗಾರರಿಗಾಗಿ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜು ನಡೆಯಲಿದೆ.
2 / 7
ಆದರೆ ಇದೇ ಮೊದಲ ಬಾರಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಈಗಾಗಲೇ ಕೆಎಲ್ ರಾಹುಲ್, ಮಾರ್ಕಸ್ ಸ್ಟೊಯಿನಿಸ್ ಹಾಗೂ ರವಿ ಬಿಷ್ಣೋಯ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮೆಗಾ ಹರಾಜಿಗಾಗಿ ಸಿದ್ಧತೆಗಳನ್ನು ಶುರು ಮಾಡಿದೆ.
3 / 7
ಮೆಗಾ ಹರಾಜಿಗಾಗಿ 58 ಕೋಟಿ ಪರ್ಸ್ ಮೊತ್ತ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೊದಲ ಆಯ್ಕೆ ದಕ್ಷಿಣ ಆಫ್ರಿಕಾ ವೇಗಿ ಕಗಿಸೊ ರಬಾಡ. ಈ ಬಗ್ಗೆ ಮಾತನಾಡಿರುವ LSG ತಂಡದ ನಾಯಕ ಕೆಎಲ್ ರಾಹುಲ್, ಪ್ರತಿ ತಂಡವು ರಬಾಡ ಅವರಂತಹ ಬೌಲರ್ನನ್ನು ಖರೀದಿಸಲು ಬಯಸುತ್ತದೆ. ಏಕೆಂದರೆ ನಾವು ಡೆಲ್ಲಿ ಕ್ಯಾಪಿಟಲ್ಸ್ ಪರ ರಬಾಡ ಪ್ರದರ್ಶನ ನೋಡಿದ್ದೇವೆ. ತಂಡದ ಗೆಲುವಿನಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಹೀಗಾಗಿಯೇ ಪ್ರತಿಯೊಂದು ತಂಡವೂ ಕಗಿಸೋ ರಬಾಡ ಅವರಂತಹ ಆಟಗಾರನನ್ನು ಖರೀದಿಸಲು ಬಯಸುತ್ತದೆ ಎಂದು ರಾಹುಲ್ ತಿಳಿಸಿದ್ದಾರೆ.
4 / 7
ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ರಡಾರ್ನಲ್ಲಿ ದಕ್ಷಿಣ ಆಫ್ರಿಕಾ ವೇಗಿ ರಬಾಡ ಇರುವುದನ್ನು ಕೆಎಲ್ ರಾಹುಲ್ ಬಹಿರಂಗಪಡಿಸಿದ್ದಾರೆ. ಹೀಗಾಗಿ ಸೌತ್ ವೇಗಿಯ ಖರೀದಿಗಾಗಿ ಲಕ್ನೋ ಫ್ರಾಂಚೈಸಿ ಭರ್ಜರಿ ಪೈಪೋಟಿ ನಡೆಸುವುದು ಖಚಿತ ಎನ್ನಬಹುದು.
5 / 7
2017 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ರಬಾಡ ಕಳೆದ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. 2017 ರಲ್ಲಿ 6 ವಿಕೆಟ್‌ಗಳನ್ನು ಪಡೆದರೂ ಗಾಯದ ಕಾರಣ ಐಪಿಎಲ್ 2018 ಅನ್ನು ತಪ್ಪಿಸಿಕೊಂಡಿದ್ದರು. ಇದಾದ ಬಳಿಕ 2019 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ರಬಾಡ 12 ಪಂದ್ಯಗಳಲ್ಲಿ 25 ವಿಕೆಟ್ ಉರುಳಿಸಿದ್ದರು.
6 / 7
ಇನ್ನು 2020 ರಲ್ಲಿ 30 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದರು. ಆದರೆ ಕಳೆದ ಸೀಸನ್ನಲ್ಲಿ ಡೆಲ್ಲಿ ಪರ 15 ಪಂದ್ಯಗಳನ್ನಾಡಿದರೂ ಪಡೆದಿದ್ದು ಕೇವಲ 15 ವಿಕೆಟ್ ಮಾತ್ರ. ಹೀಗಾಗಿಯೇ ರಬಾಡರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿತ್ತು.
7 / 7
ಆದರೆ ಇತ್ತೀಚೆಗೆ ಟೀಮ್ ಇಂಡಿಯಾ ವಿರುದ್ದ ನಡೆದ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಕಗಿಸೊ ರಬಾಡ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಮುಂದಿನ ಸೀಸನ್ ಐಪಿಎಲ್ನಲ್ಲಿ ರಬಾಡ ಖರೀದಿಗೆ ಎಲ್ಲಾ ಫ್ರಾಂಚೈಸಿಗಳು ಒಲವು ತೋರಲಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ಕಗಿಸೊ ರಬಾಡರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಇನ್ನಿಲ್ಲದ ಪ್ರಯತ್ನದ ಮಾಡಲಿದೆ.