AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕೇವಲ 2 ಮ್ಯಾಚ್​ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್

IPL 2025 RCB vs KKR: ಐಪಿಎಲ್ 2025 ಮೇ 17 ರಿಂದ ಪುನರಾರಂಭಗೊಳ್ಳಲಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಬಳಿಕ ಆರ್​ಸಿಬಿ, ಎಸ್​ಆರ್​ಹೆಚ್ ಹಾಗೂ ಎಲ್​ಎಸ್​ಜಿ ತಂಡಗಳ ವಿರುದ್ಧ ಕೂಡ ಕಣಕ್ಕಿಳಿಯಬೇಕಿದೆ.

ಝಾಹಿರ್ ಯೂಸುಫ್
|

Updated on: May 14, 2025 | 8:34 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ ಪ್ಲೇಆಫ್ ಹೊಸ್ತಿಲಲ್ಲಿದೆ. ಆಡಿರುವ 11 ಪಂದ್ಯಗಳಲ್ಲಿ ಆರ್​ಸಿಬಿ ತಂಡವು 8 ಜಯ ಸಾಧಿಸಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ.

1 / 6
ಆರ್​ಸಿಬಿ ಪ್ಲೇಆಫ್ ಹಂತಕ್ಕೇರಿದರೆ, ನಿರ್ಣಾಯಕ ಪಂದ್ಯಗಳಿಗೆ ಜೇಕಬ್ ಬೆಥೆಲ್ ಅಲಭ್ಯರಾಗುವುದು ಖಚಿತವಾಗಿದೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಬೆಥೆಲ್ ಅವರನ್ನು ಇಂಗ್ಲೆಂಡ್ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಹೀಗಾಗಿ ಮೇ 26 ರೊಳಗೆ ಅವರು ರಾಷ್ಟ್ರೀಯ ತಂಡವನ್ನು ಕೂಡಿಕೊಳ್ಳಬೇಕಿದೆ.

2 / 6
ಇದೇ ಕಾರಣದಿಂದಾಗಿ ಜೇಕಬ್ ಬೆಥೆಲ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಲಿದ್ದಾರೆ. ಅಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹಾಗೆಯೇ ಪ್ಲೇಆಫ್ ಸುತ್ತಿನಲ್ಲೂ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

3 / 6
ಇದೀಗ ಕೆಕೆಆರ್ ಹಾಗೂ ಎಸ್​ಆರ್​ಹೆಚ್ ಪಂದ್ಯಗಳಿಗೆ ಮಾತ್ರ ಲಭ್ಯರಿರುವ ಜೇಕಬ್ ಬೆಥೆಲ್ ಬದಲಿಗೆ ಆರ್​ಸಿಬಿ ಮತ್ತೋರ್ವ ಆಟಗಾರನ ಆಯ್ಕೆಯನ್ನು ಸಹ ಎದುರು ನೋಡುತ್ತಿದೆ. ಅಂದರೆ ಬೆಥೆಲ್ 2 ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಿದರೆ, ಅವರ ಸ್ಥಾನದಲ್ಲಿ ಬೇರೊಬ್ಬ ಬ್ಯಾಟರ್​ನನ್ನು ಬದಲಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

4 / 6
ಏಕೆಂದರೆ ಇತ್ತ ತಂಡದಲ್ಲಿರುವ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ಫಾರ್ಮ್​ನಲ್ಲಿಲ್ಲ. ಅಲ್ಲದೆ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಅವರು ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಗೆ ಹಿಂತಿರುಗಲಿದ್ದಾರಾ? ಎಂಬುದೇ ಪ್ರಶ್ನೆ. ಒಂದು ವೇಳೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಿದರೆ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

5 / 6
ಒಟ್ಟಿನಲ್ಲಿ ಐಪಿಎಲ್ ವೇಳಾಪಟ್ಟಿ ಬದಲಾವಣೆಯಿಂದಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಮಸ್ಯೆ ಎದುರಾಗಿದೆ. ಅದರಲ್ಲೂ ಜೋಶ್ ಹ್ಯಾಝಲ್​ವುಡ್ ಗಾಯದ ಕಾರಣ ಹೊರಗುಳಿದರೆ, ಇದೀಗ ಜೇಕಬ್ ಬೆಥೆಲ್ ಮುಂದಿನ ಸರಣಿಗಾಗಿ ತವರಿಗೆ ಹಿಂತಿರುಗಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಇಬ್ಬರು ಪ್ರಮುಖ ಆಟಗಾರರ ಅಲಭ್ಯತೆಯ ನಡುವೆ ಆರ್​ಸಿಬಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್

100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ

ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?

11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ