iQoo Neo 7 Pro: ಬೆಲೆ ಬಹಿರಂಗ, ಫೀಚರ್ಸ್ ಕೂಡ ಸೋರಿಕೆ: ರಿಲೀಸ್​ಗು ಮುನ್ನ ಹುಬ್ಬೇರಿಸಿದ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್

|

Updated on: Jun 29, 2023 | 4:39 PM

ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ.

1 / 7
ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ವಿವೋ ಇದೀಗ ಹೊಸ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ. ಇದು ಕಳೆದ ವರ್ಷ ಬಿಡುಗಡೆ ಮಾಡಿ ಸದ್ದು ಮಾಡಿದ್ದ ಐಕ್ಯೂ ನಿಯೋ 7 ಸರಣಿಯ ಮುಂದುವರೆದ ಭಾಗ.

2 / 7
ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಹೊಸ ಫೋನ್​ನಲ್ಲಿ ಸ್ನಾಪ್​ಡ್ರಾಗನ್ 8+ ಜೆನ್‌ 1 ಪ್ರೊಸೆಸರ್ ಅಳವಡಿಸಲಾಗಿದೆ. ಜೊತೆಗೆ ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ.

3 / 7
ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಜುಲೈ 4 ರಂದು ಭಾರತದಲ್ಲಿ ಬಿಡುಗಡೆ ಆಗುವುದು ಖಚಿತವಾಗಿದೆ. ಈ ಫೋನ್‌ನ ಕೆಲವು ಫೀಚರ್ಸ್ ಈಗಾಗಲೇ ಲೀಕ್‌ ಆಗಿವೆ. ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ ಈ ಫೋನ್ 6.78 ಇಂಚಿನ FHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ.

4 / 7
ಇದರಲ್ಲಿ ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್‌ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ನಿರೀಕ್ಷೆಯಿದ್ದು, ಇದು ಗೇಮಿಂಗ್​ಗೆ ಹೇಳಿ ಮಾಡಿಸಿದ್ದಾಗಿದೆ.

5 / 7
ಈ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿ ಜೊತೆಗೆ ಸ್ಯಾಮ್‌ಸಂಗ್‌ GN5 ಸೆನ್ಸರ್‌ ಆಯ್ಕೆಯ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾವನ್ನು ಹೊಂದಿರಲಿದೆ. ಟ್ರಿಪಲ್‌ ಕ್ಯಾಮೆರಾ ನೀಡಲಾಗಿದೆ ಎಂದು ಹೇಳಲಾಗಿದೆ.

6 / 7
120W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAhಸಾಮರ್ಥ್ಯದ ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ಹೇಳಲಾಗುತ್ತಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ.

7 / 7
ಭಾರತದಲ್ಲಿ ಬಿಡುಗಡೆ ಆಗಲಿರುವ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್​ನ ಆರಂಭಿಕ ಬೆಲೆ 33,999 ರೂ. ಎಂದು ತಿಳಿದುಬಂದಿದೆ. ಇದು ಇ ಕಾಮರ್ಸ್ ತಾಣ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ.

Published On - 4:30 pm, Thu, 29 June 23