- Kannada News Photo gallery iQOO Z7 5G is all set to launch in India on March 21 The company has confirmed Tech News in Kannada
iQOO Z7 5G: ಬಹುನಿರೀಕ್ಷಿತ ಐಕ್ಯೂ Z7 5G ಆಗಮನಕ್ಕೆ ದಿನಾಂಕ ಫಿಕ್ಸ್: ಏನಿದರ ವಿಶೇಷತೆ ನೋಡಿ
ಐಕ್ಯೂ ರಿಲೀಸ್ ಮಾಡಲಿರುವ ಹೊಸ ಫೋನಿನ ಹೆಸರು ಐಕ್ಯೂ Z7 (iQOO Z7) ಆಗಿದೆ. ಈ ಫೋನ್ ಇದೇ ಮಾರ್ಚ್ 21 ರಂದು ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಇದು ಐಕ್ಯೂ Z6 ನ ಉತ್ತರಾಧಿಕಾರಿಯಾಗಿದೆ ಎಂದು ಹೇಳಲಾಗಿದೆ.
Updated on: Mar 10, 2023 | 7:45 PM

ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ವಿಭಿನ್ನ ಮಾದರಿಯ ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಮತ್ತೊಂದು ಸ್ಮಾರ್ಟ್ಫೋನ್ನ ಫೋಟೋವನ್ನು ರಿವೀಲ್ ಮಾಡಿ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

ಐಕ್ಯೂ ರಿಲೀಸ್ ಮಾಡಲಿರುವ ಹೊಸ ಫೋನಿನ ಹೆಸರು ಐಕ್ಯೂ Z7 (iQOO Z7) ಆಗಿದೆ. ಈ ಫೋನ್ ಇದೇ ಮಾರ್ಚ್ 21 ರಂದು ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಇದು ಐಕ್ಯೂ Z6 ನ ಉತ್ತರಾಧಿಕಾರಿಯಾಗಿದೆ ಎಂದು ಹೇಳಲಾಗಿದೆ.

ಐಕ್ಯೂ Z6 ಜೊತೆಗೆ ಐಕ್ಯೂ Z6x ಫೋನ್ ಕೂಡ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಐಕ್ಯೂ Z6 ಸ್ಮಾರ್ಟ್‌ಫೋನ್ ಬಗ್ಗೆ ಹೆಚ್ಚಿನ ಮಾಹಿತಿ ಏನೂ ಬಹಿರಂಗವಾಗಿಲ್ಲ. ರಿವೀಲ್ ಆಗಿರುವ ಫೋಟೋದ ಪ್ರಕಾರ ಈ ಚಿತ್ರ ಮುಸುಕಿನಿಂದ ಮುಚ್ಚಿಕೊಂಡಿದೆ.

ಐಕ್ಯೂ Z7 5G ಸ್ಮಾರ್ಟ್‌ಫೋನ್ ಫೀಚರ್ಸ್ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ ಇದು 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ.

ಮೀಡಿಯಾಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಬಹುದು.

ಐಕ್ಯೂ Z7 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 44W ವೇಗದ ಚಾರ್ಜಿಂಗ್ ಬೆಂಬಲಿಸಬಹುದು. ಈ ಸ್ಮಾರ್ಟ್‌ಫೋನ್ ಬೆಲೆ 20,000ರೂ. ಗಿಂತ ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ.



















