Updated on: May 04, 2023 | 8:18 PM
ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ ನಡೆದಿದೆ.
ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ ನಡೆದಿದೆ. ಧಾರವಾಡದ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆಸಿದ್ದಾರೆ.
ಐಟಿ ಅಧಿಕಾರಿಗಳ ದಾಳಿ ವೇಳೆ ಪ್ರಶಾಂತ್ ಕೇಕರೆ ಮನೆಯಲ್ಲಿರಲಿಲ್ಲ. ಕೇಕರೆ ಅವರು ಬೇರೊಂದು ಊರಿಗೆ ತೆರಳಿದ್ದಾರೆ.
ಪ್ರಶಾಂತ್ ಕೇಕರೆ ನಿವಾಸದಲ್ಲಿ ಇಲ್ಲದ ಹಿನ್ನೆಲೆ ಅವರ ಬರುವಿಕೆಗಾಗಿ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲೂ ಐಟಿ ಅಧಿಕಾರಿಗಳಿಂದ ದಾಳಿ ನಡೆದಿತ್ತು.