
ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಂಕಷ್ಟ ಎದುರಾಗಿದೆ.

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.