
‘ವಿಕ್ರಾಂತ್ ರೋಣ’ ಸಿನಿಮಾ ತಂಡ ಭರ್ಜರಿಯಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಸಿನಿಮಾ ತೆರೆಗೆ ಬರೋಕೆ ಒಂದು ತಿಂಗಳು ಬಾಕಿ ಇರುವಾಗ ವಿವಿಧ ನಗರಗಳಿಗೆ ತೆರಳಿ ಪ್ರಚಾರ ಕಾರ್ಯ ಮಾಡಲಾಗುತ್ತಿದೆ.

ಕಿಚ್ಚ ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸೇರಿ ಇಡೀ ತಂಡ ವಿವಿಧ ಕಡೆಗಳಲ್ಲಿ ಪ್ರಚಾರ ಮಾಡುತ್ತಿದೆ. ಜಾಕ್ವೆಲಿನ್ ಅವರು ಸುದ್ದಿಗೋಷ್ಠಿಯಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ.

ಜಾಕ್ವೆಲಿನ್ ಅವರು ಸುದ್ದಿಗೋಷ್ಠಿ ಬಳಿಕ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಜತೆಗೆ ಕೆಲವು ದೃಶ್ಯಗಳಲ್ಲಿ ಅವರು ನಟಿಸಿದ್ದಾರೆ ಎನ್ನಲಾಗಿದೆ.

ಜಾಕ್ವೆಲಿನ್