- Kannada News Photo gallery Jagadish shettar three demands IN front Off Congress Leaders In Meeting Before Joning Party
ಮೂರು ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಏನೇನು ಬೇಡಿಕೆ? ಇಲ್ಲಿದೆ ನೋಡಿ
ಈ ಬಾರಿ ವಿಧಾನಸಭೆ ಚುಣಾವಣೆಗೆ ಟಿಕೆಟ್ ಇಲ್ಲ ಎಂದು ಹೈಕಮಾಂಡ್ ಸೂಚಿಸಿದ್ದರಿಂದ ಅಸಮಾಧಾನಗೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಇಂದು(ಏಪ್ರಿಲ್ 17) ಬೆಳಗ್ಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕರ ಮುಂದೆ ಪ್ರಮುಖ ಮೂರು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಏನೇನು ಬೇಡಿಕೆ ಇಟ್ಟಿದ್ದಾರೆ? ಈ ಕೆಳಗಿನಂತಿದೆ ನೋಡಿ.
Updated on: Apr 17, 2023 | 2:48 PM

ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ನಾಯಕರ ಮುಂದೆ ಜಗದೀಶ್ ಶೆಟ್ಟರ್ ಬೇಡಿಕೆ ಇಟ್ಟಿದ್ದಾರೆ. ತಮಗೆ ಹಾಗೂ ತಮ್ಮ ಆಪ್ತರಾದ ಮಾಜಿ ಶಾಸಕ SI ಚಿಕ್ಕನಗೌಡರ್ ತಮ್ಮ ತವನಪ್ಪ ಅಷ್ಟಗಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ತಮ್ಮ ಆಪ್ತರಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ನಾಯಕರ ಮುಂದೆ ಜಗದೀಶ್ ಶೆಟ್ಟರ್ ಬೇಡಿಕೆ ಇಟ್ಟಿದ್ದಾರೆ. ತಮಗೆ ಹಾಗೂ ತಮ್ಮ ಆಪ್ತರಾದ ಮಾಜಿ ಶಾಸಕ SI ಚಿಕ್ಕನಗೌಡರ್ ತಮ್ಮ ತವನಪ್ಪ ಅಷ್ಟಗಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಕುಂದಗೋಲ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿಗೆ ರಾಜೀನಾಮೆ ನೀಡಿರುವ SI ಚಿಕ್ಕನಗೌಡರ್ ಅವರಿಗೆ ಕುಂದಗೋಳ ಕ್ಷೇತ್ರಕ್ಕೆ ಟಿಕೆಟ್ ಕೊಡಿ ಎಂದು ಜಗದೀಶ್ ಶೆಟ್ಟರ್ ಕೇಳಿದ್ದಾರೆ. ಈಗಾಗಲೇ ಕುಂದಗೋಳ ಕ್ಷೇತ್ರಕ್ಕೆ ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆಯಾಗಿದ್ದರೂ ಸಹ ಚಿಕ್ಕನಗೌಡರ ಪರ ಶೆಟ್ಟರ್ ಬ್ಯಾಟಿಂಗ್ ಮಾಡಿದ್ದಾರೆ.

ಇನ್ನು ಮತ್ತೊಂದು ಕಡೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ತವನಪ್ಪ ಅಷ್ಟಗಿಗೆ ಟಿಕಟ್ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ತವನಪ್ಪ ಅಷ್ಟಗಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಂದು ಶೆಟ್ಟರ್ ಕಾಂಗ್ರೆಸ್ ನಾಯಕರ ಬಳಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಮತ್ತೊಂದು ಬೇಡಿಕೆ ಅಂದ್ರೆ ತಮಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಟಿಕೆಟ್ ನೀಡಬೇಕೆಂದು ಕೇಳಿದ್ದರು. ಅದರಂತೆ ಇಂದು ಪಕ್ಷ ಸೇರ್ಪಡೆಯಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿ ಫಾರಂ ನೀಡಿದರು.

ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಸುಮಾರು ಐದು ಗಂಟೆಗಳ ಕಾಲ ಜಗದೀಶ್ ಶೆಟ್ಟರ್ ಹಾಗೂ ಕಾಂಗ್ರೆಸ್ ನಾಯಕರು ಸುದೀರ್ಘವಾಗಿ ಮಾತುಕತೆ ಮಾಡಿದ್ದು, ಆ ವೇಳೆ ಈ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ

ಸದ್ಯ ಜಗದೀಶ್ ಶೆಟ್ಟರ್ಗೆ ಮಾತ್ರ ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಮಾಡಿ ಅವರ ಬೇಡಿಕೆ ಈಡೇರಿಸಿದ್ದಾರೆ. ಆದ್ರೆ, ಇನ್ನು ಎರಡು ಬೇಡಿಕೆಗೆ ಕಾಂಗ್ರೆಸ್ ಏನು ತೀರ್ಮಾನ ಕೈಗೊಳ್ಳುತ್ತೋ ಎನ್ನುವುದನ್ನು ಕಾದುನೋಡಬೇಕಿದೆ.




